ಪರಿಶುದ್ಧ- ಪಾರದರ್ಶಕ ಆಡಳಿತ ನೀಡುವುದು ಕಾಂಗ್ರೆಸ್ ಉದ್ದೇಶ;  ಡಿ. ಕೆ. ಶಿವಕುಮಾರ್

ದಾವಣಗೆರೆ.ಜ.೨೦; ಕಾಂಗ್ರೆಸ್ ಯಾವಾಗಲೂ ವ್ಯಕ್ತಿ ಪೂಜೆ ಮಾಡಲ್ಲ. ಪಕ್ಷ ಪೂಜೆ ಮಾಡುತ್ತದೆ. ತಾಳ್ಮೆಯಿಂದ ಕೆಲಸ ಮಾಡಿ ಅಧಿಕಾರಕ್ಕೆ ತನ್ನಿ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 135 ರಿಂದ 140 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಹೈಸ್ಕೂಲ್‌ ಮೈದಾನದಲ್ಲಿ ಏರ್ಪಡಿಸಿದ್ದ ಜನಧ್ವನಿ ಯಾತ್ರೆಯ ಬೃಹತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲರಿಗೂ ಬೇರೆ ಬೇರೆ ಅವಕಾಶ ಸಿಗುತ್ತದೆ. ತಾಳ್ಮೆಯಿಂದ ಕಾಯಬೇಕು. ಮುಂದೆ ನಿಗಮ ಮಂಡಳಿ, ಎಂಪಿ, ಎಂಎಲ್ ಸಿ ಸೇರಿದಂತೆ ಬೇರೆ ಬೇರೆ ಅಧಿಕಾರ ಸಿಗುತ್ತೆ. ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರಲು ಪ್ರಾಮಾಣಿಕವಾಗಿ ಶ್ರಮಿಸಿ ಎಂದು ಕರೆ ನೀಡಿದರು‌.2018ರಲ್ಲಿ ಕಾಂಗ್ರೆಸ್- ಜೆಡಿಎಸ್ ಸೇರಿ ಅಧಿಕಾರ ಮಾಡಿದೆವು. ಆಪರೇಷನ್ ಕ‌ಮಲ ಮಾಡಿ ಅಧಿಕಾರಕ್ಕೆ ಬಿಜೆಪಿ ಬಂತು. ದಾವಣಗೆರೆಯ ಬಿಜೆಪಿ ಶಾಸಕರೊಬ್ಬರನ್ನು ಮಂತ್ರಿ ಮಾಡಲಿಲ್ಲ. ಇಲ್ಲಿ ನಾಯಕತ್ವಕ್ಕೆ ಬೆಲೆ ಇಲ್ಲ, ಅಭಿವೃದ್ಧಿ ಬೇಕಿಲ್ಲ ಎಂಬುದಕ್ಕೆ ಸಾಕ್ಷಿ ಇದು ಎಂದು ಆಕ್ರೋಶ ವ್ಯಕ್ತಪಡಿಸಿದರು‌. ನಾವು ಬರುವಾಗ ಮೂರು ಕಡೆಗಳಲ್ಲಿ ವಾಹನ ತಡೆದಿರಿ. ವಾಹನ ನಿಲ್ಲಿಸಿದ್ರಿ.200-300 ಬೆಂಬಲಿಗರ ತೋರಿಸಿದರೆ ನಾವು ಜಗ್ಗುವುದಿಲ್ಲ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಯಾರಿಗೆ ಟಿಕೆಟ್ ಕೊಟ್ಟರೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ ಎಂದು ಹೇಳಿದರು. ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತೊಗೆಯಿರಿ‌.  ಸಿದ್ದರಾಮಯ್ಯ, ನನಗೆ, ಶಾಮನೂರು ಶಿವಶಂಕರಪ್ಪ ಅವರಿಗೆ  ಲಂಚ ಕೊಟ್ಟಿದ್ದೀರಾ. ಪರಿಶುದ್ಧ ಆಡಳಿತ ನೀಡಿದ್ದೇವೆ. ಲಂಚ ಇಲ್ಲದೇ ಬಿಜೆಪಿ ಸರ್ಕಾರದಲ್ಲಿ ಕೆಲಸ ಆಗಲ್ಲ. ನೊಟೀಸ್ ಗೆ ಪ್ರಿಯಾಂಕಾ ಖರ್ಗೆ ಹೆದರುತ್ತಾರಾ. ಯಾವುದೇ ಕಾರಣಕ್ಕೂ ಭಯಪಡಬೇಕಿಲ್ಲ. ಮುರುಗೇಶ್ ನಿರಾಣಿ ಪಿಂಪ್ ಅಂತಾ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದರೆ, ನಿರಾಣಿ ಮಾಧ್ಯಮದವರ ಜೊತೆ ಮಾತನಾಡುವಾಗ ಮಂತ್ರಿ ನಿರಾಣಿ ಅವರು, ಮರ್ಡರ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಸುಮಟೋ ಕೇಸ್ ಹಾಕಿ ತನಿಖೆ ನಡೆಸಿ‌. ಲಂಚಕ್ಕೊಬ್ಬ, ಮಂಚಕ್ಕೊಬ್ಬ ಇದ್ದವರಿಗೆ ಏನಾಯ್ತು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಛೇಡಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ. ಕೆ. ಹರಿಪ್ರಸಾದ್ ಮಾತನಾಡಿ, ದಾವಣಗೆರೆ ಜಿಲ್ಲೆಯಲ್ಲಿ ಐವರು ಬಿಜೆಪಿ ಶಾಸಕರಿದ್ದರೂ, ಯಾಕೆ ಇಲ್ಲಿನವರನ್ನು ಮಂತ್ರಿ‌ ಮಾಡಲಿಲ್ಲ. ಅಭಿವೃದ್ಧಿ ಇವನ್ನೆಲ್ಲ ದಿಂದ ಆಗುತ್ತೆ. ಬಿಜೆಪಿ ನಾಯಕರ ಮನೆ ಸ್ಮಾರ್ಟ್ ಆಗುತ್ತಿವೆ. ಆದ್ರೆ, ನಗರ ಮಾತ್ರ ಧೂಳು ಮಾತ್ರ ಇದೆ ಎಂದರು.