ಪರಿಷತ್‍ಗೆ ಮಾಜಿ ಸಭಾಪತಿ ಡೇವಿಡ್ ಸಿಮೆಯೋನ್ ನಾಮನಿರ್ದೇಶನಕ್ಕೆ ಕ್ರೈಸ್ತ ಮುಖಂಡರ ಆಗ್ರಹ

ಕಲಬುರಗಿ,ಜೂ.28:ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದ ರಾಜ್ಯ ವಿಧಾನ ಪರಿಷತ್ ಮಾಜಿ ಉಪ ಸಭಾಪತಿ ಡೇವಿಡ್ ಸಿಮೆಯೋನ್ ಅವರಿಗೆ ರಾಜ್ಯ ವಇಧಾನ ಪರಿಷತ್‍ಗೆ ನಾಮ ನಿರ್ದೇಶನ ಮಾಡಬೇಕು ಎಂದು ಕ್ರೈಸ್ತ್ ಸಮುದಾಯದ ಹಿರಿಯ ಮುಖಂಡ ಸಿಮೆಯೋನ್ ಸಾಮುವೆಲ್ ಅವರು ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಭಾಗದ ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದ ಕ್ರೈಸ್ತ ಸಮುದಾಯದ ಹಾಗೂ ರಾಜಕೀಯ ಗಣ್ಯರಾದ ಡೇವಿಡ್ ಸಿಮೆಯೋನ್ ಅವರು ಕಳೆದ 47 ವರ್ಷಗಳಿಂದ ರಾಜಕೀಯದ ಮೂಲಕ ಜನಸೇವೆಯಲ್ಲಿ ತೊಡಗಿದ್ದಾರೆ. ಅಲ್ಲದೇ ಅವರು ನಿಷ್ಠಾವಂತ ರಾಜಕಾರಣಿ ಮತ್ತು ಕಳೆದ ಲೋಕಸಭೆ ಮತ್ತು ವಿಧಾನಸಭಾ ಮತ್ತು ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ, ತಾಲ್ಲೂಕುಗಳಲ್ಲಿ ಮತ್ತು ಹೋಬಳಿಗಳಲ್ಲಿ ಮತ್ತು ಗ್ರಾಮಗಳಲ್ಲಿ ತಿರುಗಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಜಯಭೇರಿ ಬಾರಿಸುವಲ್ಲಿ ಕೆಲಸ ನಿರ್ವಹಿಸಿದ್ದಾರೆ ಎಂದರು.
ಕ್ರೈಸ್ತ ಸಮುದಾಯದವರನ್ನು ಒಟ್ಟುಗೂಡಿಸಿ ಕಾಂಗ್ರೆಸ್ ಪಕ್ಷವನ್ನು ಡೇವಿಡ್ ಸಿಮೆಯೋನ್ ಅವರು ಬಲಪಡಿಸಿದ್ದಾರೆ. ಅಲ್ಲದೇ ಪಕ್ಷದ ಸಂಘಟನೆಯಲ್ಲಿ ಹೆಚ್ಚಿನ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದಾರೆ. ಆದ್ದರಿಂದ ಅವರಿಗೆ ರಾಜ್ಯ ವಿಧಾನ ಪರಿಷತ್‍ಗೆ ನಾಮ ನಿರ್ದೇಶನ ಮಾಡಬೇಕು ಎಂದು ಮನವಿ ಮಾಡಿದ ಅವರು, ಈಗಾಗಲೇ ನೂತನ ಕಾಂಗ್ರೆಸ್ ಸರ್ಕಾರ ಬಂದಿರುವುದರಿಂದ ಹಿಂದುಳಿದ ಜನಾಂಗ ಮತ್ತು ಅಲ್ಪಸಂಖ್ಯಾತರಿಗೆ ಮತ್ತು ಮುಂದುವರೆದ ಸಮುದಾಯದವರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿದ್ದು, ಕ್ರೈಸ್ತ ಸಮುದಾಯಕ್ಕೂ ಪ್ರಾತಿನಿಧ್ಯವನ್ನು ಮೇಲ್ಮನೆಯಲ್ಲಿ ಕೊಡಬೇಕು ಎಂದು ಕೋರಿದರು.
ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿರಾಜ್ ಹಾಗೂ ಐಟಿಬಿಟಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕ್ರೈಸ್ತ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಲು ಡೇವಿಡ್ ಸಿಮೆಯೋನ್ ಅವರಿಗೆ ರಾಜ್ಯ ವಿಧಾನ ಪರಿಷತ್‍ಗೆ ನಾಮ ನಿರ್ದೇಶನ ಮಾಡಬೇಕು ಎಂದು ಅವರು ಮನವಿ ಮಾಡಿದರು. ಸುದ್ದಿಗೋಷ್ಠಿಯಲಲಿ ವಿಜಯಕುಮಾರ್ ಐ., ಸಂಜಯಕುಮಾರ್ ದೇವಪುತ್ರ, ಜಡಸನ್ ಜಾನ್ ಮುಂತಾದವರು ಉಪಸ್ಥಿತರಿದ್ದರು.