ಪರಿಷತ್ ಚುನಾವಣೆ:ಚಿತ್ರದುರ್ಗ-ದಾವಣಗೆರೆ ಕ್ಷೇತ್ರಕ್ಕೆ ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿ?

 
ದಾವಣಗೆರೆ.ನ.೧೩ : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಚಿತ್ರದುರ್ಗ- ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯ ಸಾವಯವ ಕೃಷಿ ಮಿಷನ್ ನ ಮಾಜಿ ಅಧ್ಯಕ್ಷ ಬಿ.ಸೋಮಶೇಖರ್ ಪ್ರಬಲ ಆಕಾಂಕ್ಷಿಯಾಗಿದ್ದು, ಅವರನ್ನು ಕಣಕ್ಕಿಳಿಸಲು ಪಕ್ಷದ ನಾಯಕರು ಸಹ ಒಲವು ವ್ಯಕ್ತಪಡಿಸಿದ್ದಾರೆ.ಕಾಂಗ್ರೆಸ್‌ನ ಹಾಲಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಈ ಬಾರಿ   ಕಣಕ್ಕಿಳಿಯುವುದಿಲ್ಲ ಎಂದು ಸ್ಪಷ್ಟ ಪಡಿಸಿರುವುದರಿಂದ ಸೋಮಶೇಖರ್ ಅವರ ಹೆಸರು ಮುನ್ನೆಲೆಗೆ ಬಂದಿದೆ. ಬಿ.ಸೋಮಶೇಖರ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ ಕಾಲದಿಂದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದು ,ಅದನ್ನು ಪರಿಗಣಿಸಿ ಪಕ್ಷದ ಪ್ರಮುಖರು ಚಿತ್ರದುರ್ಗ-ದಾವಣಗೆರೆ ಕ್ಷೇತ್ರ ದಿಂದ ಕಣಕ್ಕಿಳಿಯಲು ಸಿದ್ಧತೆ ನಡೆಸುವಂತೆ ಅವರಿಗೆ ಸೂಚನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಈ ಹಿನ್ನೆಲೆಯಲ್ಲಿ ಸೋಮಶೇಖರ್  ಜಿಲ್ಲೆಯ ಶಾಸಕರು ಸೇರಿದಂತೆ ಪ್ರಮುಖ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದು,ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.