ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ

ದಾವಣಗೆರೆ.ನ.೨೯; ವಿಧಾನಪರಿಷತ್ ಚುನಾವಣೆಗೆ ಸಂಬಂಧಪಟ್ಟಂತೆ ರಾಜ್ಯದ  25 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಪ್ಪತ್ತು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ ಎಂದು ವಿಧಾನ ಪರಿಷತ್ ನ ದಾವಣಗೆರೆ ಜಿಲ್ಲಾ ಉಸ್ತುವಾರಿ ಹಾಗೂ ಮಾಜಿ ಸಚಿವ ಎಚ್ ಎಂ ರೇವಣ್ಣ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ವಿಭಾಗಕ್ಕೆ ಬರುವ ಕ್ಷೇತ್ರಕ್ಕೆ ಬಿ ಸೋಮಶೇಖರ್ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ. ಈ ಅಭ್ಯರ್ಥಿಯೂ ವಿದ್ಯಾರ್ಥಿ ದೆಸೆಯಿಂದ ಹಿಡಿದು ಗ್ರಾಮ ಪಂಚಾಯಿತಿ ಮಟ್ಟದಿಂದ ರಾಜ್ಯಮಟ್ಟದವರೆಗೂ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಈ ನಿಟ್ಟಿನಲ್ಲಿ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಕ್ಷೇತ್ರದಲ್ಲಿ ಕಳೆದ 3ಬಾರಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು ಕಾಂಗ್ರೆಸ್ ನ ಭದ್ರಕೋಟೆ ಎಂದು ಹೇಳಿದರು.ಈಗಾಗಲೇ ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಪ್ರವಾಸ ಮಾಡಿ ಮತದಾರರನ್ನು ಭೇಟಿ ಮಾಡಲಾಗಿದೆ. ಅದಲ್ಲದೆ ದಾವಣಗೆರೆ ಜಿಲ್ಲೆಯಲ್ಲೂ ಕೆಲ ಭಾಗಗಳಲ್ಲಿ ಸಂಚರಿಸಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸುವಂತೆ ಕೋರಲಾಗಿದೆ.ಎಲ್ಲ ಕಡೆಯಲ್ಲೂ ಉತ್ತಮ ಬೆಂಬಲ ದೊರಕಿದೆ ನಮ್ಮ ಅಭ್ಯರ್ಥಿಯ ಗೆಲುವು ಖಚಿತ ಎಂದು ಹೇಳಿದರು.ಈ ಹಿಂದೆ ಮತದಾನ ಕೇವಲ ಉಳ್ಳವರ ಹಕ್ಕಾಗಿತ್ತು. ರಾಜೀವ್ ಗಾಂಧಿ ಪ್ರಧಾನ ಮಂತ್ರಿಯಾದ ಸಂದರ್ಭದಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಎಲ್ಲಾ ವರ್ಗದ ಎಲ್ಲಾ ವರ್ಗದ ಜನರಿಗೆ ಮತದಾನದ ಹಕ್ಕನ್ನು ನೀಡಿದ್ದು ಕಾಂಗ್ರೆಸ್ ಪಕ್ಷ. ಅಲ್ಲದೆ ಎಲ್ಲಾ ವರ್ಗಕ್ಕೂ ಒಳಿತನ್ನು ಮಾಡಿದ ಪಕ್ಷ ಅದುವೇ ಕಾಂಗ್ರೆಸ್ ಪಕ್ಷ ಎಂದು ಹೇಳಿದರು.ದೇಶದಲ್ಲಿ ಎಪ್ಪತ್ತು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಏನು ಮಾಡಿಲ್ಲ ಎನ್ನುವ ಬಿಜೆಪಿ ಅವರಿಗೆ ನಮ್ಮ ಕಾಂಗ್ರೆಸ್ ಪಕ್ಷದ ಹೆಜ್ಜೆಗುರುತುಗಳನ್ನು ಒಮ್ಮೆ ಹಿಂತಿರುಗಿ ನೋಡಬೇಕಾಗಿದೆ. ಅವರಿಗೆ ನಾವು, ನಮ್ಮ ಪಕ್ಷ ಮಾಡಿದ ಕೆಲಸಗಳನ್ನು ಮನವರಿಕೆ ಮಾಡಬೇಕಾಗಿದೆ ಈ ನಿಟ್ಟಿನಲ್ಲಿ ನಾವು ಹೆಜ್ಜೆ ಇಡಬೇಕಾಗಿದೆ ಎಂದರು.ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಆಡಳಿತದಲ್ಲಿ ಚುನಾವಣೆಯ ಪ್ರಣಾಳಿಕೆಯಲ್ಲಿ ಹೇಳಿದಂತೆ ನೂರಾ ಅರವತ್ತೈದು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅವೆಲ್ಲವೂ ಜನಮನ್ನಣೆ ಕಾರ್ಯಕ್ರಮಗಳಾಗಿದ್ದವು ಎಲ್ಲಾ ವರ್ಗಕ್ಕೂ ಬೇಕಾದ ಕಾರ್ಯಕ್ರಮ ಆಗಿದ್ದವು ಎಂದರು. ಸುದ್ದಿಗೋಷ್ಠಿಯಲ್ಲಿ ಪಿ.ರಾಜಕುಮಾರ್, ಅಬ್ದುಲ್ ಜಬ್ಬಾರ್, ಎಂ. ಟಿ.ಸುಭಾಷ್ ಚಂದ್ರ, ಎಚ್. ಲಿಂಗಣ್ಣ, ವೆಂಕಟೇಶ್ ಇತರರು ಇದ್ದರು.