ಪರಿಷತ್ ಚುನಾವಣೆ: ಅಂತಿಮ ಕಣದಲ್ಲಿ ಮೂವರು ಅಭ್ಯರ್ಥಿಗಳು

ಚಿತ್ರದುರ್ಗ, ನ.27; ಕರ್ನಾಟಕ ವಿಧಾನ ಪರಿಷತ್ ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ  ಉಮೇದುವಾರಿಕೆ ಹಿಂಪಡೆಯುವಿಕೆ ಕೊನೆಯ ದಿನದ ನಂತರ ಮೂವರು ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ನ.26 ರಂದು ಮಧ್ಯಾಹ್ನ 3ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಯಾವುದೇ ನಾಮಪತ್ರಗಳನ್ನು ಹಿಂಪಡೆಯಲಾಗಿಲ್ಲ. ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ 4 ಉಮೇದುವಾರರಿಂದ ಒಟ್ಟು 7 ನಾಮಪತ್ರಗಳು ಸ್ವೀಕೃತವಾಗಿದ್ದು, 01 ಉಮೇದುವಾರರ ನಾಮಪತ್ರ ತಿರಸ್ಕøತಗೊಂಡಿದ್ದು, ಎಲ್ಲಾ 3 ನಾಮಪತ್ರಗಳು ಕ್ರಮಬದ್ಧವಾಗಿ ಅಂಗೀಕಾರವಾಗಿರುತ್ತದೆ. ಅಂತಿಮ ಕಣದಲ್ಲಿ ಭಾರತೀಯ ಜನತಾ ಪಕ್ಷದ ನವೀನ್ ಕೆ.ಎಸ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸೋಮಶೇಖರ್ ಬಿ ಹಾಗೂ ಪಕ್ಷೇತರ ಅಭ್ಯರ್ಥಿ ಹನುಮಂತಪ್ಪ ಅವರು ಅಂತಿಮ ಕಣದಲ್ಲಿದ್ದಾರೆ ಎಂದು ತಿಳಿಸಿದರು.
 ಭಾರತೀಯ ಚುನಾವಣಾ ಆಯೋಗವು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ನವೀನ್ ರಾಜ್ ಸಿಂಗ್ ಅವರನ್ನು ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದರು.
 ಮತದಾರರು ಮತ್ತು ಮತಗಟ್ಟೆಗಳ ಸಂಖ್ಯೆ: ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವ್ಯಾಪ್ತಿಗೆ ದಾವಣಗೆರೆ ಜಿಲ್ಲೆಯ ಹರಿಹರ, ದಾವಣಗೆರೆ ಹಾಗೂ ಜಗಳೂರು ತಾಲ್ಲೂಕು ಸೇರಿವೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕು ಸೇರಿದಂತೆ ದಾವಣಗೆರೆ ಜಿಲ್ಲೆಯ ಮೂರು ತಾಲ್ಲೂಕುಗಳು ಹಾಗೂ ಚಿತ್ರದುರ್ಗ ಜಿಲ್ಲೆಯ ಆರು ತಾಲ್ಲೂಕು ಸೇರಿದಂತೆ ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ವ್ಯಾಪ್ತಿಗೆ ಒಟ್ಟು 9 ತಾಲ್ಲೂಕುಗಳು ಸೇರಿವೆ.
ಹರಿಹರ ತಾಲ್ಲೂಕಿನಲ್ಲಿ 24 ಮತಗಟ್ಟೆ, ದಾವಣಗೆರೆ 42, ಜಗಳೂರು 23 ಮತಗಟ್ಟೆ ಸೇರಿದಂತೆ ಒಟ್ಟು 89 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.  ಮೊಳಕಾಲ್ಮುರು ತಾಲ್ಲೂಕಿನಲ್ಲಿ 17 ಮತಗಟ್ಟೆ, ಚಳ್ಳಕೆರೆ 41, ಚಿತ್ರದುರ್ಗ 39, ಹೊಳಲ್ಕೆರೆ 30, ಹಿರಿಯೂರು  34 ಹಾಗೂ ಹೊಸದುರ್ಗ ತಾಲ್ಲೂಕಿನಲ್ಲಿ 34 ಮತಗಟ್ಟೆ ಸೇರಿದಂತೆ 195 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ದಾವಣಗೆರೆ ಜಿಲ್ಲೆಯ ಮೂರು ತಾಲ್ಲೂಕು ಹಾಗೂ ಚಿತ್ರದುರ್ಗ ಜಿಲ್ಲೆಯ ಆರು ತಾಲ್ಲೂಕುಗಳಿಂದ ಒಟ್ಟು 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 2384 ಪುರುಷ ಮತದಾರರು, 2689 ಮಹಿಳಾ ಮತದಾರರು ಸೇರಿದಂತೆ ಒಟ್ಟು 5073 ಮತದಾರರು ಇದ್ದಾರೆ.
452 ಮತದಾನ ಸಿಬ್ಬಂದಿ: ಪ್ರತಿಯೊಂದು ಮತಗಟ್ಟೆಗೆ ಒಬ್ಬರು ಪಿಆರ್‍ಓ ಹಾಗೂ ಒಬ್ಬರು ಎಪಿಆರ್‍ಓ ಅವರನ್ನು ನೇಮಕ ಮಾಡಲಾಗಿದ್ದು, 226 ಪಿಆರ್‍ಓ ಹಾಗೂ 226 ಎಪಿಆರ್‍ಓ ಸೇರಿದಂತೆ ಒಟ್ಟು 452 ಮತದಾನ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ನವೆಂಬರ್ 30 ಮತ್ತು ಡಿಸೆಂಬರ್ 06 ರಂದು ತರಬೇತಿಯನ್ನು ಆಯಾ ತಾಲ್ಲೂಕು ಮಟ್ಟದಲ್ಲಿ ತರಬೇತಿ ನೀಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ್ ಶಿನ್ನಾಳ್‍ಕರ್ ಇದ್ದರು.
======

Attachments area