ಪರಿಷತ್ ಚುನಾವಣೆ: ಕೆಪಿಸಿಸಿ ಸಭೆಯಲ್ಲಿ ಎಸ್ಸೆಸ್ ಭಾಗಿ


ದಾವಣಗೆರೆ.ನ.೧೭: ಬರುವ ವಿಧಾನಪರಿಷತ್ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರದುರ್ಗ- ದಾವಣಗೆರೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಛೇರಿಯಲ್ಲಿ ದಾವಣಗೆರೆ- ಚಿತ್ರದುರ್ಗ ಜಿಲ್ಲೆಗಳ ಹಾಲಿ ಮತ್ತು ಮಾಜಿ ಶಾಸಕರುಗಳು, ಪಕ್ಷದ ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕರ‍್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವರು, ಹಾಲಿ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪನವರು, ಮಾಜಿ ಸಚಿವ ಹೆಚ್.ಆಂಜನೇಯ, ಶಾಸಕ ರಾಮಪ್ಪ, ಮಾಜಿ ಶಾಸಕ ಹೆಚ್.ಪಿ.ರಾಜೇಶ್, ಮಾಜಿ ಸಂಸದ ಚಂದ್ರಪ್ಪ, ಮಾಜಿ ಶಾಸಕರುಗಳಾದ ಉಮಾಪತಿ, ಗೋವಿಂದಪ್ಪ, ಮಾಯಕೊಂಡ ಪರಾಜಿತ ಅಭ್ಯರ್ಥಿ ಕೆ.ಎಸ್.ಬಸವಂತ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ‍್ಯದರ್ಶಿ ದಿನೇಶ್ ಕೆ.ಶೆಟ್ಟಿ ಉಪಸ್ಥಿತರಿದ್ದರು.