ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ

ಚಾಮರಾಜನಗರ. ಜೂ.07:- ಪರಿಸರವನ್ನು ಉಳಿಸಿ, ಬೆಳೆಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಚಾಮರಾಜನಗರ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಎಚ್. ಉಮೇಶ್ ತಿಳಿಸಿದರು.
ಮಂಗಳವಾರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲ್ಭೆಜು, ರಾಷ್ಟ್ರೀಯ ಸೇವಾ ಯೋಜನೆ, ಯಕೋ ಕ್ಲಬ್, ಭೂಗೋಳಶಾಸ್ತ್ರ ವಿಭಾಗ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ, ಮಾತನಾಡಿ, ದಿನನಿತ್ಯ ವಿದ್ಯಾರ್ಥಿಗಳು ತಮ್ಮ ಶಾಲಾ ಕಾಲ್ಭೆಜು, ಮನೆಗಳ ಮುಂದೆ ಸ್ವಚ್ಛತೆ ಕಾಪಾಡಿ ಇತರೆಯಾಗಿ ಅರಿವು ಮೂಡಿಸುವ ಕೆಲಸವನ್ನು ಮಾಡಿದರೆ ಶುದ್ಧ ಗಾಳಿ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.
ಮನುಷ್ಯನು ಆರೋಗ್ಯವಾಗಿರಬೇಕಾದರೆ ಶುದ್ಧ ಗಾಳಿ ಮುಖ್ಯ. ಆದ್ದರಿಂದ ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧನೆ ಮಾಡಬಹುದು. ಈ ಹಿನ್ನಲೆ ರಾಷ್ಟ್ರೀಯ ನಾಯಕರ ಜನ್ಮ ದಿನಾಚರಣೆ ಅಂಗವಾಗಿ, ಜನ್ಮ ದಿನಾಚರಣೆ ಅಂಗವಾಗಿ ಗಿಡ ನೆಡುವ ಹವ್ಯಾಸ ಬೆಳೆಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪೆÇ್ರ ಎಂ.ಆರ್. ಸುಮತಿ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ, ಸೇವೆ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ, ಪರಿಸರ ಉಳಿಸುವ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಬಹುಮಾನಗಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಬೀಟ್ ಫಾರೆಸ್ಟರ್ ಗೌರಿಶಂಕರ್ ಉಪನ್ಯಾಸಕರಾದ ಡಾ.ಸಿ. ಮಂಜುನಾಥ್, ಡಾ. ಎಂ.ಸಿ. ಪ್ರಭಾವತಿ, ಸಿದ್ದರಾಜು, ಜಯಣ್ಣ, ಬಾಲಸುಬ್ರವ್ಮಣ್ಯಂ, ಕುಸುಮ, ರುಕ್ಮಿಣಿ, ಗುರುರಾಜ್, ಪವನ್, ಮೇಘಸ್, ಸಾಕಮ್ಮ ಸೇರಿದಂತೆ ಎನ್‍ಎಸ್‍ಎಸ್ ಅಧಿಕಾರಿಗಳು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಇತರರು ಹಾಜರಿದ್ದರು.