ಪರಿಸರವನ್ನು ಕಾಪಾಡಿ ಉತ್ತಮ ವಿದ್ಯಾರ್ಥಿಯಾಗಿ ಹೆಸರುಗಳಿಸಿ- ಎಂ.ಎಸ್.ಮಾದಯ್ಯ

ಸಂಜೆವಾಣಿ ವಾರ್ತೆ
ಚಾಮರಾಜನಗರ.ಜೂ.06:- ಪರಿಸರವನ್ನು ಕಾಪಾಡಿ ಉತ್ತಮ ವಿದ್ಯಾರ್ಥಿಯಾಗಿ ಸಾರ್ವಜನಿಕರಲ್ಲಿ ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಶಾಲೆಗೆ ಕೀರ್ತಿ ತರಬೇಕು. ಪರಿಸರದ ರಕ್ಷಣೆಯಿಂದ ಸುತ್ತಮುತ್ತಲಿನ ವಾತಾವರಣ ಶುದ್ಧವಾಗುತ್ತದೆ ಎಂದು ಶ್ರೀರಾಮಚಂದ್ರ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಂ.ಎಸ್.ಮಾದಯ್ಯ ತಿಳಿಸಿದರು.
ನಗರದ ನ್ಯಾಯಾಲಯ ರಸ್ತೆಯಲ್ಲಿ ಇರುವ ಶ್ರೀರಾಮಚಂದ್ರ ವಿದ್ಯಾಸಂಸ್ಥೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು. ಚಾಮರಾಜನಗರ ಜಿಲ್ಲೆಯು ಹಸಿರಿನಿಂದ ಕೂಡಿದೆ. ಹಸಿರು ಆರೋಗ್ಯದ ಸಂಕೇತ ಹಸಿರನ್ನು ಉಳಿಸಿಕೊಳ್ಳುವ ಹೊಣೆ ಪ್ರತಿಯೊಬ್ಬರದು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪರಸರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ಎಂ.ರುದ್ರಮೂರ್ತಿರವರು ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾS Éಯು ಉಚಿತವಾಗಿ ನೀಡಿರುವ ಪುಸ್ತಕಗಳನ್ನು ವಿತರಿಸಿ ಮಾತನಾಡಿ ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಕರು ತಿಳಿಸುವ ಪಠ್ಯಗಳನ್ನು ಕಲಿತು ವಿದ್ಯಾವಂತರಾಗಬೇಕು. ಜೊತೆಗೆ ಶಾಲೆಯ ಪರಿಸರವನ್ನು ಸ್ವಚ್ಚವಾಗಿ ಇಟ್ಟಿಕೊಳ್ಳಬೇಕು. ಒಂದು ಗಿಡವನ್ನು ದತ್ತು ತೆಗೆದು ಅದನ್ನು ಪೋಷಣೆಮಾಡಬೇಕು ಮುಂದಿನ ದಿನಗಳಲ್ಲಿ ನೀವು ಬೆಳೆಸಿದ ಗಿಡ ಮರವಾಗಿ ನಿಮ್ಮ ಹೆಸರು ಹೇಳುತ್ತದೆ ಎಂದರು ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ರತ್ನಮ್ಮ, ಕುಮಾರ್, ದೈಹಿಕ ಶಿಕ್ಷಕ ರಂಗಸ್ವಾಮಿ, ಮಹೇಶ್, ನಾಗರಾಜು, ಯಶಪಾಲ್.ಡಿ.ಎಸ್. ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.