ಪರಿಸರ ಅರಿವು ಜಾಗೃತಿಗೆ ಸಲಹೆ

ಕೋಲಾರ,ಡಿ.೪:ಜಾಗತಿಕ ಯುಗದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯ ಪ್ರತಿಯೊಬ್ಬರಿಂದ ಆಗಬೇಕು ಎಂದು ರೋಟರಿ ಕ್ಲಬ್ ಜಿಲ್ಲಾ ಸಹಾಯಕ ರಾಜ್ಯಪಾಲ ಹಾಗೂ ಸಿರಿಗನ್ನಡ ವೇದಿಕೆ ಜಿಲ್ಲಾಧ್ಯಕ್ಷ ಎಚ್. ರಾಮಚಂದ್ರಪ್ಪ ಹೇಳಿದರು.
ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾಪಂನ ಸರಕಾರಿ ಶಾಲೆಯ ಆವರಣದಲ್ಲಿ ರೋಟರಿ ಕ್ಲಬ್, ಸಿರಿಗನ್ನಡ ವೇದಿಕೆ ಹಾಗೂ ರಾಜ್ಯ ಅನಿಕೇತನ ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವದ, ಕನ್ನಡದ ಸೇವಕರಿಗೆ ಅಭಿನಂದನೆ ಹಾಗೂ ವಿವಿಧ ಸ್ವರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ವಿಶ್ವದಲ್ಲಿ ಕೋವಿಡ್-೧೯ ಮಹಾಮಾರಿಯೂ ಪರಿಸರ ನಾಶದಿಂದ ಬಹಳ ಸಾವು ನೋವುಗಳನ್ನು ಕಣ್ಣ ಮುಂದೆ ಖಂಡಿದ್ದೇವೆ, ಹೀಗಾಗಿ ಪರಿಸರವನ್ನು ಉಳಿಸಿ ಬೆಳಸುವ ಮನೋಭಾವವನ್ನು ಮೈಗೊಡಿಸಿಕೊಳ್ಳಬೇಕು ಎಂದರು.
ಈ ನಿಟ್ಟಿನಲ್ಲಿ ಮುಂದಿನ ಯುವ ಪೀಳಿಗೆಗೆ ಪರಿಸರವನ್ನು ಉಳಿಸಿಕೊಡುವುದರ ಜೊತೆಗೆ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಿ ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಸಹಕರಿಸಬೇಕೆಂದರು.
ಗಾಂಧಿಪ್ರತಿಮೆ ಸ್ಥಾಪನೆಗೆ ಬೇಡಿಕೆಯಿದ್ದು, ಆಡಳಿತ ಮಂಡಳಿ ಮುಂದಾದರೆ ತಮ್ಮ ಸಹಕಾರ ಎಂದಿಗೂ ಇರುತ್ತದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಮಾಡುವುದರ ಜೊತೆಗೆ ವಿದ್ಯಾರ್ಥಿಗಳ ಕಲಿಕೆಗೆ ಸಹಕರಿಸಲಾಗುವುದು ಎಂದರು.
ವಲಯ ರಾಜ್ಯಪಾಲ ಎಸ್.ವಿ ಸುಧಾಕರ್ ಮಾತನಾಡಿ, ಶಾಲಾ ಮುಖ್ಯಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಅತ್ಯುತ್ತಮ ಶಿಕ್ಷಣವನ್ನು ನೀಡಲಾಗುತ್ತಿದ್ದು, ವಲಯ ಪಾಲಕರು ತಿಳಿಸಿದ ಹಾಗೆ ನಮ್ಮ ಇತಿಮಿತಿಯಲ್ಲಿ ಶಾಲೆಗೆ ಪೂರಕ ಸೌಲಭ್ಯ ಒದಗಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕೋಲಾರ ಕಾರ್ಯದರ್ಶಿ ಎಂ.ಎನ್ ರಾಮಚಂದ್ರಗೌಡ, ನಿಯೋಜಿತ ಅಧ್ಯಕ್ಷ ಬಿ.ಶಿವಕುಮಾರ್, ಶಾಲೆಯ ಮುಖ್ಯೋಪಾಧ್ಯಾಯ ಶ್ರೀನಿವಾಸ್, ಕವಿ, ಸಾಹಿತಿ ಕೋಗಿಲಹಳ್ಳಿ ಕೃಷ್ಣಪ್ಪ, ವೆಂಕಟೇಶ್, ಮುನಿಕೃಷ್ಣಪ್ಪ, ಸಿ.ಎಂ ಕೃಷ್ಣಪ್ಪ, ದೊಡ್ಡವೀರಯ್ಯ, ಉಪಸ್ಥಿತರಿದ್ದರು. ಗ್ರಾಮ ಪಂಚಾಯತಿ ಅಧ್ಯಕ್ಷೆ ಹೇಮಾಮಾಲಿನಿ, ಕವಿ ವನಿತಾ ಅರಲೇರಿ, ರಾಧಾ ಡಾ ಪ್ರಕಾಶ್, ಗಾಯಕಿ ನಳಿನಾಕ್ಷಿ ಉಪಸ್ಥಿತರಿದ್ದರು.