ಪರಿಸರ ಕಾಳಜಿಗೆ ಮಾದರಿಯಾದ ಶಿವಕುಮಾರ


ಹುಬ್ಬಳ್ಳಿ,ಜೂ.7: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಿವಕುಮಾರ ಹಿರೇಮಠ ಎಂಬುವವರು ತೆಂಗಿನ ಮರಗಳನ್ನು ಉಚಿತವಾಗಿ ವಿತರಿಸುವ ಮೂಲಕ ಪರಿಸರ ಕಾಳಜಿ ತೋರಿಸಿದ್ದು, ಇತರರಿಗೂ ಮಾದರಿಯಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಶಿರುನಾಳ ಪ್ರಾಥಮಿಕ ಶಾಲೆಯಲ್ಲಿ ಆಚರಿಸಿದ ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಅವರು 100 ತೆಂಗಿನ ಸಸಿಗಳನ್ನು ಉಚಿತವಾಗಿ ವಿತರಿಸಿದರು.

ಈ ಸಂದರ್ಭದಲ್ಲಿ ಪ್ರಶಾಂತ ರೆಡ್ಡಿ, ಅರಣ್ಯ ಇಲಾಖೆ ಸಿಬ್ಬಂದಿ ಎಸ್.ಜಿ. ಭಟ್, ಶಾಲೆಯ ಪ್ರೀತೇಶ್ ನಾಯ್ಕ್ ಹಾಗೂ ಶಾಲಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತ: ಕಲಬುರ್ಗಿ ಜಿಲ್ಲೆಯವರಾದ ಶಿವಕುಮಾರ ಅವರು ಸಾಲುಮರದ ತಿಮ್ಮಕ್ಕ ಅವರ ಹೆಸರಿನಲ್ಲಿ ಪ್ರತಿವರ್ಷ 100 ಸಸಿಗಳನ್ನು ರಾಜ್ಯದ ಬೇರೆ ಬೇರೆ ಸ್ಥಳಗಳಲ್ಲಿ ವಿತರಿಸುತ್ತ ಬರುತ್ತಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.