ಬಳ್ಳಾರಿ.ಜೂ.08: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಹೆಚ್ಚು ಹೆಚ್ಚು ಸಸಿಗಳನ್ನು ನೆಟ್ಟು ಅವುಗಳನ್ನು ಬೆಳೆಸಿ, ಉಳಿಸುವ ಕೆಲಸ ಮಾಡಬೇಕು. ಪರಿಸರ ಸಮತೋಲನ ಕಾಪಾಡಲು ನಾವೆಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಹೇಳಿದರು.
ಅರಣ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘ ಇವರ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸೋಮವಾರ ನೂತನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಿವಿಧ ಜಾತಿಯ ಸಸಿ ನೆಡುವ ಮೂಲಕ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದರು.
ವಕೀಲರ ಸಂಘದ ಅಧ್ಯಕ್ಷರಾದ ಕೆ.ಎರ್ರಿಗೌಡ, ಕಾರ್ಯದರ್ಶಿ ಬಿ.ರವೀಂದ್ರನಾಥ್ ಸೇರಿದಂತೆ ಎಲ್ಲಾ ನ್ಯಾಯಾಧೀಶರುಗಳು, ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.