ಪರಿಸರ ಸಂರಕ್ಷಣೆಗೆ ಕೈ ಜೋಡಿಸಿ

ಕೋಲಾರ,ಜೂ,೬-ವಿಶ್ವಪರಿಸರ ದಿನಾಚಾರಣೆ ಅಂಗವಾಗಿ ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಶಾಲೆ ಆವರಣದಲ್ಲಿ ನಡೆದ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿ ಡಾ.ಕೆ.ರಾಜು, ಪರಿಸರ ಜಾಗೃತಿ ಹಾಗೂ ಸಂರಕ್ಷಣೆಯ ಕುರಿತು ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿ, ಪರಿಸರ ಉಳಿಸುವ ಕಾಯಕದಲ್ಲಿ ಪ್ರತಿಯೊಬ್ಬರೂ ಕೈಜೋಡಿಸೋಣ ಎಂದರು.
ನ್ಯಾಯಾಧೀಶರಾದ ಸುಶೀಲ ಎಸ್.ಹೊಸಮನಿ, ಡಿಡಿಪಿಐ ಕೃಷ್ಣಮೂರ್ತಿ, ಬಿಇಒ ಕನ್ನಯ್ಯ, ಮುಖ್ಯಶಿಕ್ಷಕ ಸಿ.ಎನ್.ಪ್ರದೀಪ್ ಕುಮಾರ್ ಮತ್ತಿತರರಿದ್ದರು.