ಪರಿಸರ ಸಂರಕ್ಷಣೆಯಲ್ಲಿ ನೌಕರರು, ಸಾರ್ವಜನಿಕರ ಸಹಭಾಗಿತ್ವ ಅಗತ್ಯ

ಹುಬ್ಬಳ್ಳಿ,ಜೂ6: ಬಸ್ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ನೌಕರರು ಹಾಗೂ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಎಂದು ವಾಕರಸಾ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಭರತ್.ಎಸ್ ಹೇಳಿದ್ದಾರೆ.
ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ಬಸ್ ನಿಲ್ದಾಣಗಳ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ.ಲಿ. ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ. ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.
ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಂಸ್ಥೆಯ ವ್ಯಾಪ್ತಿಯ 9ವಿಭಾಗಗಳು, ಕಾರ್ಯಾಗಾರಗಳು, 55 ಬಸ್ ಡಿಪೆÇಗಳು, ಪ್ರಮುಖ ಬಸ್ ನಿಲ್ದಾಣಗಳು ಮತ್ತಿತರ ಖಾಲಿ ಸ್ಥಳಗಳಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಟ್ಟು ಪೆÇೀಷಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಬಸ್ ನಿಲ್ದಾಣಗಳು ಸಾರಿಗೆ ಸಂಸ್ಥೆಯ ಮುಖವಾಣಿ ಇದ್ದಂತೆ. ಸಿಬ್ಬಂದಿ ಶಿಸ್ತುಬದ್ದವಾಗಿ ಕರ್ತವ್ಯ ನಿರ್ವಹಿಸಬೇಕು.ಬಸ್ ಗಳು ಹಾಗೂ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು. ಎಲ್ಲೆಂದರಲ್ಲಿ ಉಗುಳುವುದು,ಕಸ ಎಸೆಯುವುದನ್ನು ಮಾಡದೆ ಸಾರ್ವಜನಿಕ ಪ್ರಯಾಣಿಕರೂ ಸಹಕರಿಸಬೇಕು ಎಂದು ವ್ಯವಸ್ಥಾಪಕ ನಿರ್ದೇಶಕರು ಕರೆ ನೀಡಿದರು.
ಪರಿಸರ ಸಂರಕ್ಷಣೆಯ ಹಾಗೂ ಸ್ವಚ್ಚತೆ ಬಗ್ಗೆ ನೌಕರರು ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಸ್ಥೆಯಲ್ಲಿ ಜೂನ್ 6 ರಿಂದ 12 ರವರೆಗೆ ವಿಶೇಷ ಬಸ್ ನಿಲ್ದಾಣಗಳ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಅಭಿಯಾನದ ಅವಧಿಯಲ್ಲಿ ಬಸ್ ನಿಲ್ದಾಣಗಳಲ್ಲಿ ಶೌಚಾಲಯಗಳು ಹಾಗೂ ಆವರಣದ ಸ್ವಚ್ಛತೆ ನಿರ್ವಹಣೆ, ತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿಗೆ ಒತ್ತು ನೀಡಲಾಗುವುದು. ಬಸ್ ಮತ್ತು ಬಸ್ ನಿಲ್ದಾಣಗಳಲ್ಲಿ ಧೂಮಪಾನ ಎಲೆ ಅಡಿಕೆ ಗುಟ್ಕಾ ತಿಂದು ಉಗುಳುವುದನ್ನು ಹಾಗೂ ಮರುಬಳಕೆಯಾಗದ ಪ್ಲಾಸ್ಡಿಕ್ ಬಳಕೆ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಗೆ ಭಿತ್ತಿಪತ್ರ,ಗೋಡೆ ಬರಹ, ಸ್ಟಿಕ್ಕರ್, ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಅಭಿಯಾನದ ಪ್ರಯುಕ್ತ ಸಂಸ್ಥೆಯ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಹಾಗೂ ಉತ್ತರಕನ್ನಡ ಜಿಲ್ಲೆಗಳ 14 ಪ್ರಮುಖ ಬಸ್ ನಿಲ್ದಾಣಗಳ ನಡುವೆ ಸ್ವಚ್ಚತೆ ಹಾಗೂ ನಿರ್ವಹಣೆ ಬಗ್ಗೆ ಸ್ಪರ್ಧೆ ಏರ್ಪಡಿಸಲಾಗಿದೆ.ಉತ್ತಮ ನಿರ್ವಹಣೆ ಮಾಡುವ ಮೂರು ಬಸ್ ನಿಲ್ದಾಣಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ನೀಡಿ ಪೆÇ್ರೀತ್ಸಾಹಿಸಲಾಗುತ್ತದೆ ಎಂದು ಭರತ್.ಎಸ್ ತಿಳಿಸಿದ್ದಾರೆ.
ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ ಹುದ್ದಾರ,ಮುಖ್ಯ ತಾಂತ್ರಿಕ ಇಂಜಿನಿಯರ್ ಎಚ್.ಎಂ.ರಮೇಶ್, ಮುಖ್ಯ ಕಾಮಗಾಗಿ ಇಂಜಿನಿಯರ್ ಪ್ರಕಾಶ ಕಬಾಡೆ, ಉಪ ಮುಖ್ಯ ಸಂಚಾರ ವ್ಯವಸ್ಥಾಪಕ ಎಚ್.ರಾಮನಗೌಡರ, ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಶಶಿಧರ ಕುಂಬಾರ,ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ ಮತ್ತಿತರರು ಇದ್ದರು.