ದೇವನಹಳ್ಳಿ,ಜೂ.೭- ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಣೆ ಮಾಡಿ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ದೇವನಹಳ್ಳಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಸಂತ್‌ಕುಮಾರ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಾಲೆಪುರ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಪ್ರಾದೇಶಿಕ ಹಾಗೂ ಸಾಮಾಜಿಕ ಅರಣ್ಯ ವಿಭಾಗದ ಸಹಯೋಗದೊಂದಿಗೆ ಇಂದು ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮರಗಳ ಕಡಿತ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ನಾಶವಾಗುತ್ತಿದೆ. ಇದರಿಂದ ಹವಾಮಾನ ವೈಪರೀತ್ಯ ಉಂಟಾಗಿ ಕಾಲ ಕಾಲಕ್ಕೆ ಮಳೆಯಾಗುತ್ತಿಲ್ಲ, ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ, ಹೊಸ ಹೊಸ ಸಾಂಕ್ರಾಮಿಕ ರೋಗಗಳು ಹುಟ್ಟಿಕೊಳ್ಳುತ್ತಿವೆ. ಇವುಗಳಿಂದ ಮುಂದಿನ ಪೀಳಿಗೆಯನ್ನು ರಕ್ಷಿಸುವ ದೃಷ್ಟಿಯಿಂದ ಪರಿಸರವನ್ನು ನಾವೆಲ್ಲರೂ ಕಾಪಾಡಬೇಕು. ಪ್ರತಿಯೊಬ್ಬರು ಮರಗಿಡಗಳನ್ನು ನೆಟ್ಟು, ಬೆಳೆಸಿ ಪರಿಸರವನ್ನು ರಕ್ಷಿಸಿ ಎಂದು ತಿಳಿಸಿದರು.
ಪ್ರಾದೇಶಿಕ ಹಾಗೂ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ್ ಭಟ್ ಅವರು ಮಾತನಾಡಿ ೨೦೨೩ರ ವಿಶ್ವ ಪರಿಸರ ದಿನವನ್ನು ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರಗಳು(soಟuಣioಟಿ ಣo ಠಿಟಚಿsಣiಛಿ ಠಿoಟಟuಣioಟಿ) ಎಂಬ ಧ್ಯೇಯದೊಂದಿಗೆ ಆಚರಿಸಲಾಗುತ್ತಿದೆ. ಪರಿಸರವನ್ನು ಕಾಪಾಡಿಕೊಳ್ಳಲು ಪರಿಸರದ ಮಹತ್ವದ ಬಗ್ಗೆ ಪ್ರತಿಯೊಬ್ಬರಿಗೂ ತಿಳಿದಿರಬೇಕು ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆಯನ್ನು ತ್ಯಜಿಸುವ ಮೂಲಕ ಪರಿಸರವನ್ನು ರಕ್ಷಿಸಬಹುದು ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಶ್ರೀಕಂಠ.ಎನ್ ಅವರು ಮಾತನಾಡಿ ಮುಂದಿನ ಪೀಳಿಗೆಯವರಿಗಾಗಿ ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ. ಮಕ್ಕಳ ಆರೋಗ್ಯ ದೃಷ್ಟಿಯಿಂದ ಪ್ಲಾಸ್ಟಿಕ್, ಕಲುಷಿತ ಆಹಾರವನ್ನು ಸೇವಿಸಬೇಡಿ. ಅಂಗಡಿಗಳಲ್ಲಿ ಸಿಗುವ ಪ್ಲಾಸ್ಟಿಕ್ ಮಿಶ್ರಿತ ಆಹಾರ ತಿಂಡಿ ತಿನಿಸುಗಳನ್ನು ಸೇವಿಸಬಾರದು. ಪ್ಲಾಸ್ಟಿಕ್ ಪರಿಸರವನ್ನು ಕಲುಷಿತಗೊಳಿಸುತ್ತದೆ. ಪರಿಸರವನ್ನು ಸಂರಕ್ಷಿಸಲು ಮಕ್ಕಳು ಪಾಲುದಾರರಾಗಿ ಗಿಡಮರಗಳನ್ನು ಬೆಳೆಸಿ, ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಆಗುವ ಪರಿಸರ ಹಾನಿಯ ಬಗ್ಗೆ , ನಿಮ್ಮ ತಂದೆ ತಾಯಿಗೆ ಅರಿವು ಮೂಡಿಸಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.