ಪರಿಸರ ಸ್ನೇಹಿ ಶಿಕ್ಷಕರ ದಿನಾಚರಣೆ

ಕಲಬುರಗಿ,ಸೆ.05: ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‍ನಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ ‘ಶಿಕ್ಷಕರ ದಿನಾಚರಣೆ’ಯಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಎಲ್ಲಾ ಶಿಕ್ಷಕರಿಗೆ ಸಸಿಗಳನ್ನು ನೀಡಿ ಪರಿಸರ ಜಾಗೃತಿಯೊಂದಿಗೆ ವಿಶೇಷವಾಗಿ ಪರಿಸರ ಸ್ನೇಹಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಡಾ.ವಾಸುದೇವ ಸೇಡಂ, ಎಚ್.ಬಿ.ಪಾಟೀಲ, ಅಸ್ಲಾಂ ಶೇಖ್, ಸಂತೋಷ ಹೂಗಾರ, ಶಿವಯೋಗಪ್ಪ ಬಿರಾದಾರ, ಪ್ರಿಯಾಂಕಾ ದೋಟಿಕೊಳ್ಳ, ಸಾನಿಯಾ ಶೇಖ್, ಐಶ್ವರ್ಯ ಬಿರಾದಾರ, ಶೃತಿ ಶಿರೂರ್, ಪಾಯಲ್ ಹಿಬಾರೆ ಹಾಗೂ ವಿದ್ಯಾರ್ಥಿಗಳಿದ್ದರು.