ಪರಿಹಾರ

ಮುಂಡಗೋಡದ ಮೈನಳ್ಳಿ ಗ್ರಾ.ಪಂ ವ್ಯಾಪ್ತಿಯ ಕಾಳೆಕಾರ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ರೈತ ಘಾಟು ಶಿಂದೆ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸರಕಾರದಿಂದ ಮಂಜೂರು ಮಾಡಿಸಿದ ಐದು ಲಕ್ಷ ರೂ ಪರಿಹಾರದ ಚೆಕ್ ಅನ್ನು ಸಚಿವ ಶಿವರಾಮ ಹೆಬ್ಬಾರ ಕುಟುಂಬಸ್ಥರಿಗೆ ನೀಡಿದರು. ಈ ಸಂದರ್ಭದಲ್ಲಿ ವಾಕರಸಾ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ, ಜಿ.ಪಂ ಸದಸ್ಯ ಎಲ್.ಟಿ.ಪಾಟೀಲ ತಹಶೀಲ್ದಾರ್ ಶ್ರೀಧರ ಮುಂದಲಮನಿ, ಎಪಿಎಮ್‌ಸಿ ಮಾಜಿ ಅಧ್ಯಕ್ಷ ದೇವು ಪಾಟೀಲ, ಬಿಜೆಪಿ ಘಟಕಾಧ್ಯಕ್ಷ ನಾಗಭೂಷಣ ಹಾವಣಗಿ, ಸಿ.ಕೆ. ಅಶೋಕ ಉಪಸ್ಥಿತರಿದ್ದರು.