ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮೆರಾ ಅಳವಡಿಕೆ

ವಿಜಯಪುರ: ಮಾ.೨೪- ರಂದು ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿಯೊಂದು ಕೊಠಡಿಯಲ್ಲೂ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸುವಂತೆ ಪರೀಕ್ಷಾ ಮಂಡಳಿಯ ಸೂಚನೆಯ ಮೇರೆಗೆ ಪರೀಕ್ಷಾ ಕೊಠಡಿಗಳಿಗೆ ಕ್ಯಾಮೆರಾಗಳು ಅಳವಡಿಸುವ ಕಾರ್ಯ ಭರದಿಂದ ಸಾಗಿದೆ.
ಹೋಬಳಿಯಲ್ಲಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರಗತಿ ಪ್ರೌಢಶಾಲೆ, ನಾರಾಯಣಪುರ ಸರ್ಕಾರಿ ಪ್ರೌಢಶಾಲೆಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಮಾಡಿದ್ದು, ನಾಲ್ಕೂ ಕೇಂದ್ರಗಳಲ್ಲಿ ಒಟ್ಟು ೯೪೧ ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲೂ ಕ್ಯಾಮೆರಾಗಳ ಜೊತೆಗೆ ಪ್ಯಾನುಗಳನ್ನು ಅಳವಡಿಸುವಂತೆ ಸೂಚನೆ ನೀಡಿರುವುದರಿಂದ ಶಾಲಾ ಕೊಠಡಿಗಳಲ್ಲಿ ಸಿ.ಸಿ.ಕ್ಯಾಮೆರಾಗಳು ಮತ್ತು ಫ್ಯಾನುಗಳನ್ನು ಅಳವಡಿಸಲಾಗುತ್ತಿದೆ ಎಂದು ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯಶಿಕ್ಷಕ ರಾಜು ಹವಳೇಕರ್ ತಿಳಿಸಿದರು.