ಪರೀಕ್ಷಾ ಕೇಂದ್ರಗಳ ಸುತ್ತ 2 ನಿರ್ಬಂಧ

ಬಳ್ಳಾರಿ,ಏ.27: ಕರ್ನಾಟಕ ಲೋಕಸೇವಾ ಆಯೋಗದಿಂದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಹಾಗೂ ಜಲ ಸಂಪನ್ಮೂಲ ಇಲಾಖೆಯಲ್ಲಿ ವಿವಿಧ ಗ್ರೂಪ್ ‘ಸಿ’ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಏ. 29 ಹಾಗೂ 30 ರಂದು ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಜರುಗಲಿದ್ದು, ಸುಗಮವಾಗಿ ಪರೀಕ್ಷೆ ನಡೆಸಲು ಅನುವಾಗುವಂತೆ ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ.
ಜಿಲ್ಲೆಯ 5 ಪರೀಕ್ಷಾ ಕೇಂದ್ರಗಳಲ್ಲಿ ಏ.29 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ಹಾಗೂ ಏ.30 ರಂದು ಬೆಳಗ್ಗೆ 10 ರಿಂದ 11.30 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಒಳಗಿನ ಆವರಣವನ್ನು ನಿರ್ಭಂಧಿತ ಪ್ರದೇಶವೆಂದು ಘೋಷಿಸಿದ್ದು,  ಆಯಾ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನಲ್ಲಿರುವ ಜೆರಾಕ್ಸ್ ಸೆಂಟರ್‍ಗಳನ್ನು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಮುಚ್ಚುವಂತೆ ಹಾಗೂ ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ನಿಷೇಧಿಸಲಾಗಿದೆ.
ಈ ಆದೇಶವು ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.