ಪರೀಕ್ಷಾ ಪೂರ್ವ ಸಿದ್ಧತಾ ಸಭೆ

ಲಕ್ಷ್ಮೇಶ್ವರ,ಮಾ24: ತಾಲೂಕ ಪಂಚಾಯತಿಯ ಸಾಮರ್ಥ್ಯ ಸೌಧದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ತಾಲೂಕಾ ಪಂಚಾಯಿತಿ ಲಕ್ಷ್ಮೇಶ್ವರ ತಹಶೀಲ್ದಾರ್ ಕಾರ್ಯಾಲಯ ಲಕ್ಷ್ಮೇಶ್ವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ ಏಪ್ರಿಲ್ ನಲ್ಲಿ ಜರುಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆ ಜರುಗಿತು.
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿಎಮ್ ಮುಂದಿನ್ಮನಿ ಮಾತನಾಡಿ ಲಕ್ಷ್ಮೇಶ್ವರದ ಆರು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1647 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಇದರಲ್ಲಿ ಕನ್ನಡ ಮಾಧ್ಯಮದಲ್ಲಿ 1134 ಆಂಗ್ಲ ಮಾಧ್ಯಮದಲ್ಲಿ ಉರ್ದು ಮಾಧ್ಯಮದಲ್ಲಿ 76 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂದರು.
ಮಾರ್ಚ್ 31 ರಿಂದ ಪರೀಕ್ಷೆಗಳು ಆರಂಭವಾಗಲಿದ್ದು ಈಗಾಗಲೇ ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕಿನ ಸರ್ಕಾರಿ ಶಾಲೆಗಳು ಅನುದಾನಿತ ಪ್ರೌಢಶಾಲೆಗಳು ಅನುದಾನ ರಹಿತ ಪ್ರೌಢಶಾಲೆಗಳಲ್ಲಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿಯನ್ನು ಸಹ ನೀಡಲಾಗಿದ್ದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಮನೋ ಧೈರ್ಯ ತುಂಬಲಾಗಿದೆ ಎಂದರು.
ತಹಶೀಲ್ದಾರ್ ಕೆ ಆನಂದ ಸಿಂಗ್ ಶೀಲ್ ಅವರು ಮಾತನಾಡಿ ಲಕ್ಷ್ಮೇಶ್ವರ ತಾಲೂಕಿನ ಆರು ಪರೀಕ್ಷಾ ಕೇಂದ್ರದಲ್ಲಿ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡು ಯಾವುದೇ ನಕಲು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
ಪರೀಕ್ಷೆಗಳ ನೋಡಲ್ಲ ಅಧಿಕಾರಿ ಉಮೇಶಹುಚ್ಚಯ್ಯನಮಠ ಅವರು ಲಕ್ಷ್ಮೇಶ್ವರ ತಾಲೂಕಿನ 6 ಪರೀಕ್ಷಾ ಕೇಂದ್ರಗಳಾದ ಉಮಾ ವಿದ್ಯಾಲಯ ಪಿ.ಎಸ್ ಬಿ.ಡಿ. ಬಾಲಕಿಯರ ಪ್ರೌಢಶಾಲೆ ಬಿಸಿಎನ್ ಕನ್ನಡ ಮಾಧ್ಯಮ ಪ್ರೌಢಶಾಲೆ ಪುಟ್ಟ ಗಾಂವ ಬಡ್ನಿ ಸರ್ಕಾರಿ ಪ್ರೌಢಶಾಲೆ ಎಸ್ ಎಸ್ ಕೆ ಪ್ರೌಢಶಾಲೆ ಶಿಗ್ಲಿ ಮತ್ತು ಈ ಬಾರಿ ಹೊಸದಾಗಿ ಬಾಲೆಹೊಸೂರು ಸರ್ಕಾರಿ ಪ್ರೌಢಶಾಲೆಗೆ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರ ಮಂಜುರಾಗಿದೆ ಎಂದರು.
ವೇದಿಕೆಯ ಮೇಲೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂವಿ ಬಡಿಗೇರ್ ನರೇಗಾ ಯೋಜನೆಯ ಸಹಾಯಕ ನಿರ್ದೇಶಕರಾದ ಕೃಷ್ಣಧರ್ಮ ರ ಇದ್ದರು.
ಪೂರ್ವಭಾವಿ ಸಭೆಯಲ್ಲಿ ಪೆÇಲೀಸ ಇಲಾಖೆ ಆರೋಗ್ಯ ಇಲಾಖೆ ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಈಶ್ವರ್ ಮೆಡ್ಲೇರಿ ಕಾರ್ಯಕ್ರಮ ನಿರ್ವಹಿಸಿದರು.