ಪರೀಕ್ಷೆಗಳು ಉದ್ಯೋಗ ಪಡೆಯಲು ಅಗತ್ಯ

ವಿಜಯಪುರ:ಜ.18: ಯು.ಜಿ.ಸಿ-ಎನ್.ಇ.ಟಿ. ಹಾಗೂ ಎಸ್.ಎಲ್.ಇಟಿ. ಮೊದಲಾದ ಅರ್ಹತಾ ಪರೀಕ್ಷೆಗಳು ಉದ್ಯೋಗ ಪಡೆಯಲು ಅಗತ್ಯವಾಗಿದ್ದು, ಅವುಗಳಿಂದ ಜೀವನ ರೂಪಿತವಾಗುತ್ತದೆ ಎಂದು ಮಹಿಳಾ ವಿವಿಯ ಕುಲಸಚಿವ ಪ್ರೊ. ಬಿ.ಎಸ್. ನಾವಿ ತಿಳಿಸಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದÀ ಸ್ಪರ್ಧಾತ್ಮಕ ಪರೀಕ್ಷಾ ಕೋಚಿಂಗ್ ಅಕಾಡೆಮಿಯು ಜಿ20 ಶೃಂಗ ಸಭೆ 2023ರ ಅಂಗವಾಗಿ ಶಿಕ್ಷಣ ಅಧ್ಯಯನ ವಿಭಾಗದಲ್ಲಿ 12 ದಿನಗಳ ಕಾಲ ನಡೆಯುವ ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮ ಕುರಿತು ದಿಕ್ಸೂಚಿ ಭಾಷಣ ಮಾಡಿದ ಮಹಿಳಾ ವಿವಿಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ.ಪಿ.ಜಿ.ತಡಸದ, ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದಿಂದ ಈ ಅರ್ಹತಾ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮ ಕುರಿತು ಮಾತನಾಡಿದ ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ವಿಷ್ಟು ಶಿಂಧೆ, ಇಂತಹ ತರಬೇತಿಗಳು ನೇರ ಅನುಭವ ನೀಡುವುದರ ಜೊತೆಗೆ, ಕೌಶಲ್ಯ ವೃದ್ಧಿಯ ದೃಷ್ಟಿಯಿಂದ ಇವು ಬಹಳ ಸಹಾಯಕಾರಿಯಾಗಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ಅತಿಥಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕೋತ್ತರ ವಿದ್ಯಾರ್ಥಿನಿಯರು, ಪದವಿ ವಿದ್ಯಾರ್ಥಿನಿಯರು ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಂ.ಎಡ್. ಪ್ರಶಿಕ್ಷಣಾರ್ಥಿ ಇಂದುಮತಿ ಪ್ರಾರ್ಥಿಸಿದರು. ಸ್ಪರ್ಧಾತ್ಮಕ ಪರೀಕ್ಷಾ ಕೋಚಿಂಗ್ ಅಕಾಡೆಮಿಯ ಸಂಯೋಜಕ ಡಾ. ಪ್ರಕಾಶ ಸಣ್ಣಕ್ಕನವರ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಎಲ್ಲರನ್ನು ಸ್ವಾಗತಿಸಿದರು. ಡಾ. ರೂಪಾ ನಾಯಕೋಡಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು