ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ

ಗದಗ,ಆ31 : ಸೆಪ್ಟೆಂಬರ್ 3 ರಂದು ಜರುಗುವ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವಂತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ತಿಳಿಸಿದರು.
ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷೆಯ ಸಮಯದಲ್ಲಿ ವಿದ್ಯುತ್, ಆರೋಗ್ಯ, ಸಾರಿಗೆ, ಖಜಾನೆ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ ಒದಗಿಸಿ ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ ಅವರು ಮಾತನಾಡಿ ನಗರದಲ್ಲಿ ಒಟ್ಟು 19 ಪರೀಕ್ಷಾ ಕೇಂದ್ರಗಳಿದ್ದು ಆಸನ ವ್ಯವಸ್ಥೆ ಹಾಗೂ ಕೇಂದ್ರದಲ್ಲಿ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷೆಯು ಎರಡು ಅವಧಿಗಳನ್ನು ಒಳಗೊಂಡಿದೆ. ಮೊದಲ ಅವಧಿಯಲ್ಲಿ 3844 ವಿದ್ಯಾರ್ಥಿಗಳಿದ್ದು ಎರಡನೆ ಅವಧಿಯಲ್ಲಿ 5004 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆಂದು ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಬುರಡಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ ರೋಣ ಕ್ಷೇತ್ರ ಶಿಕ್ಷಣಾಧಿಕಾರಿ ಹುರಳಿ ಕೇಂದ್ರಗಳ ಮುಖ್ಯ ಅಧೀಕ್ಷಕರು ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು ಹಾಗೂ ಮಾರ್ಗಾಧಿಕಾರಿಗಳು ಉಪಸ್ಥಿತರಿದ್ದರು.