ಪರೀಕ್ಷೆ-೦೨ ತಯಾರಿಗೆ ಪರಿಹಾರ ಬೋಧನೆ,

ಶಿಡ್ಲಘಟ್ಟ:-ಮೇ,೧೮-ಶಿಕ್ಷಣ ಪ್ರತಿಷ್ಠಾನದ ಮೂಲಕ ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುವಂತೆ ಮಾಡಲು ಪ್ರಯತ್ನಿಸುತ್ತಿವೆ. ಸರ್ಕಾರವು ಸಹ ಸರ್ಕಾರಿ ಶಾಲೆಯಲ್ಲಿ ಈ ಬಾರಿ ಅನುತ್ತೀರ್ಣ ವಾಗಿರುವ ವಿದ್ಯಾರ್ಥಿಗಳಿಗೆ ವಿಶೇಷ ಶಿಕ್ಷಣ ನೀಡುವಂತಹ ಸೌಕರ್ಯಗಳನ್ನು ಪೂರೈಸಿ ಮುಂಬರುವ ಸಪ್ಲಿಮೆಂಟರಿ ಪರೀಕ್ಷೆ- ೨ ರಲ್ಲಿ ಹೆಚ್ಚಿನ ಅಂಕ ಪಡೆದುಕೊಳ್ಳಲು ತಯಾರಿಯ ಅನುಕೂಲತೆಗಳನ್ನು ಕಲ್ಪಿಸುತ್ತಿದೆ ಎಂದು ಪ್ರಭಾರಿ ಮುಖ್ಯ ಶಿಕ್ಷಕಿ ಸೈದಾ ಇಶ್ರತ್ ತಿಳಿಸಿದರು.
ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ೨೦೨೩-೨೪ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನೆ ವಿದ್ಯಾ ವಂಚಿತರಾಗದಂತೆ ಉತ್ತಮ ಕ್ರಮಕ್ಕೆ ಮುಂದಾದ ಶಿಕ್ಷಣ ವರ್ಗ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಈಗಷ್ಟೇ ೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ೧ ರಿಸಲ್ಟ್ ಬಿಡುಗಡೆ ಮಾಡಿದ್ದು ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು, ಅಂಕಗಳನ್ನು ಹೆಚ್ಚಿಸಿಕೊಳ್ಳಲು ಬಯಸುವವರು ಹಾಗೂ ಪರೀಕ್ಷೆಗೆ ಗೈರಾದವರು ಜೂನ್ ನಲ್ಲಿ ನಡೆಯುವ ಸಪ್ಲಿಮೆಂಟರಿ
ಪರೀಕ್ಷೆ-೨ ಕ್ಕೆ ಬರೆಯುವವರಿಗೆ ಅನುಕೂಲತೆಗಾಗಿ ಈ ಶಾಲೆಯಲ್ಲಿ ಮಕ್ಕಳಿಗಾಗಿ ತಯಾರಿ ಮಾಡಲಾಗುತ್ತಿದೆ ಎಂದರು.
೨೦೨೩-೨೪ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ಆಗಿರುವಂತ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನೆ ಮೂಲಕ ವಿಶೇಷ ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಶ್ರಮಿಸಲಾಗುವುದು. ಅವರಲ್ಲೂ ಶಿಕ್ಷಣದ ಕುರಿತು ಆಸಕ್ತಿ ಮೂಡಿಸಲಾಗುವುದು ಎಂದರು.
ಪರಿಹಾರ ಬೋಧನೆ ಇಂದಿನ ಮಕ್ಕಳಿಗೆ ಅಗತ್ಯವಾಗಿದ್ದು, ಉತ್ತಮ ಕಲಿಕೆ ಮತ್ತು ಶಿಕ್ಷಣಕ್ಕೆ ಸಹಕಾರಿಯಾಗಲಿದೆ. ನಮ್ಮ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಮಾರು ೪೨ ವಿದ್ಯಾರ್ಥಿಗಳು ಅನುತ್ತೀರ್ಣ ಆಗಿದ್ದು ಅದರಲ್ಲಿ ೨೫ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರಿಹಾರ ಬೋಧನೆ ಪಾಠ ಕಲಿಯಲಿಕ್ಕೆ ಭಾಗವಹಿಸುತಿದ್ದಾರೆ ಪ್ರತಿದಿನ ಒಂದೊಂದು ವಿಷಯಕ್ಕೆ ಸಂಬಂಧಪಟ್ಟಂತೆ ಪಾಠ ಪ್ರವಚನಗಳನ್ನು ಹೇಳಿಕೊಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಸಿ.ಎಲ್ ಸತೀಶ್, ಕುಸುಮ,ಎಸ್.ನಳಿನಿ,ಎಂ.ಕೆ ಗೋಪಾಲಕೃಷ್ಣ, ಮುರಳಿ, ಶಾಲೆಯ ಇತರೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.