‘ಪರ್ವ’ ಕಾದಂಬರಿಗೆ ವಿವೇಕ್ ಅಗ್ನಿಹೋತ್ರಿ ಆಕ್ಷನ್ ಕಟ್

ಹಿರಿಯ ಲೇಖಕ ಎಸ್.ಎಲ್. ಭೈರಪ್ಪ ಅವರ ‘ಪರ್ವ’ ಕಾದಂಬರಿ ಇದೀಗ ಸಿನಿಮಾವಾಗುತ್ತಿದೆ. ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ.
ಕನ್ನಡ ಮತ್ತು ಹಿಂದಿಯಲ್ಲಿ ಮೂರು ಭಾಗಗಳಲ್ಲಿ ಚಿತ್ರದ ತೆರೆಗೆ ಬರಲಿದೆ.
ಚಿತ್ರದ ಶೀರ್ಷಿಕೆಯನ್ನು ಕಾದಂಬರಿಕಾರ ಎಸ್.ಎಲ್ ಬೈರಪ್ಪ ಸಮ್ಮುಖದಲ್ಲಿ ಅನಾವರಣ ಮಾಡಲಾಯಿತು.
ಈ ವೇಳೆ ಮಾತಿಗಿಳಿದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ಮಹಾಭಾರತದಲ್ಲಿ ಕೇಳದೆ ಇರುವ ವಿಷಯಗಳನ್ನ ಕಾದಂಬರಿಯಲ್ಲಿ ಬೈರಪ್ಪ ಅವರು ಬರೆದಿದ್ದಾರೆ. ಇದಕ್ಕಾಗಿ ಸಾಕಷ್ಟು ವರ್ಷಗಳ ಕಾಲ ಶ್ರಮಿಸಿದ್ದಾರೆ. ಈ ಸಿನಿಮಾ ಮೂರು ಭಾಗಗಳಲ್ಲಿ ಬರಲಿದೆ.ಹಿರಿಯ ಕಲಾವಿದ ಪ್ರಕಾಶ್ ಬೆಳವಾಡಿ ಅವರು ಭೈರಪ್ಪನ ಜೊತೆ ಮಾತನಾಡಿ ” ಪರ್ವ ” ಸಿನಿಮಾ ಮಾಡಲು ಹೇಳಿದ್ದರು.ಇದೀಗ ಸಿನಿಮಾ ರೂಪದಲ್ಲಿ ತೆರೆಗೆ ತರಲಾಗುತ್ತಿದೆ ಎಂದರು
ಎಸ್.ಎಲ್. ಭೈರಪ್ಪ ಮಾತನಾಡಿ, ವಿವೇಕ್ ಅಗ್ನಿಹೋತ್ರಿ ಅವರಿಗೆ ಸಾಕಷ್ಟು ಅನುಭವವಿದೆ. ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಇಂಗ್ಲೀಷ್ ನಲ್ಲಿ ಸಿನಿಮಾ ಮಾಡಬೇಕು. ನಿಜವಾದ ಮಹಾಭಾರತ ಏನೋ ಅನ್ನೋದನ್ನು ತೋರಿಸಬಹುದು ಎಂದರು.
ಪಲ್ಲವಿ ಜೋಷಿ ಮಾತನಾಡಿ, ‘ಪರ್ವ ಕಾದಂಬರಿ ಸಿನಿಮಾ ಮಾಡುತ್ತಿರುವುದು ಜವಾಬ್ದಾರಿ ಹೆಚ್ಚಿದೆ.ಈ ವಿಷಯ ನಿರ್ವಹಿಸುವುದು ಅಷ್ಟು ಸುಲಭವಲ್ಲ. ಪ್ರಕಾಶ್ ಬೆಳವಾಡಿ ಇಲ್ಲದೇ ಸಿನಿಮಾ ಆಗುತ್ತಿರಲಿಲ್ಲ’ ಎಂದು ಹೇಳಿದರು.