
ಮುಂಬೈ, ಮೇ.5-ಎನ್ ಸಿಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶರದ್ ಪವಾರ್ ಇಂದು ಸಂಜೆ ವಾಪಸ್ ಪಡೆದಿದ್ದಾರೆ. ಇದರೊಂದಿಗೆ ಮೂರು ದಿನಗಳ ರಾಜಕೀಯ ಪ್ರಹಸನಕ್ಕೆ ತೆರೆಬಿದ್ದಿದೆ.
ಯುವ ನಾಯಕರು ಹಾಗೂ ಲಕ್ಷಾಂತರ ಕಾರ್ಯಕರ್ತರ ಒತ್ತಡಕ್ಕೆ ಮಣಿದಿರುವ ಹಿರಿಯ ನಾಯಕ ಪವಾರ್ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಲು ನಿರ್ಧರಿಸಿದ್ದಾರೆ.
ನೂತನ ಅಧ್ಕಕ್ಷರನ್ನು ಆಯ್ಕೆ ಮಾಡಲು ರಚಿಸಿದ್ದ ಸಮಿತಿ, ಪವಾರ್ ಅವರ ರಾಜೀನಾಮೆಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.
ಈ ಬಗ್ಗೆ ಮುಂಬೈನಲ್ಲಿ ಪ್ರತಿಕ್ರಿಯೆ ನೀಡಿರುವ ಪವಾರ್, ನನ್ನ ಮೇಲೆ ತೋರಿದ ಪ್ರೀತಿ ಮತ್ತು ನಂಬಿಕೆಗೆ ಸಂತಸ ವ್ಯಕ್ರಪಡಿಸಿ, ಹಿರಿಯರ ಸಮಿತಿ ತೆಗೆದುಕೊಂಡ ನಿರ್ಣಯಕ್ಕೆ ಗೌರವ ನೀಡಿ ರಾಜೀನಾಮೆ ವಾಪಸ್ ಪಡೆಯುತ್ತೇನೆ ಎಂದು ತಿಳಿಸಿದರು.
ಇತ್ತೀಚೆಗೆ ನಡೆದ ತಮ್ಮ ಆತ್ಮಚರಿತ್ರೆ ಬಿಡುಗಡೆ ಸಮಾರಂಭದಲ್ಲಿ ಶರದ್ ಪವಾರ್ ಹಠಾತ್ ರಾಜೀನಾಮೆ ನೀಡಿದ್ದು ಅಚ್ಚರಿಗೆ ಕಾರಣವಾಗಿತ್ತು.
ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಒಗ್ಗಟ್ಟಿನ ಕುರಿತಂತೆ ಹಲವು ಪ್ರಶ್ನೆಗಳು ಎದ್ದಿದ್ದವು.