ಪವಿತ್ರಾಗೆ ದ್ವಿತೀಯ ಸ್ಥಾನ

ಬ್ಯಾಡಗಿ, ಡಿ4: ತಾಲೂಕಿನ ಮೋಟೆಬೆನ್ನೂರ ಗ್ರಾಮದ ನವೋದಯ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಕು.ಪವಿತ್ರಾ ವೀರಯ್ಯ ಚರಂತಿಮಠ ಜಿಲ್ಲಾ ಮಟ್ಟದ ಸಿರಿ ನುಡಿ ರಸಪ್ರಶ್ನೆಯ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.

ಹಾವೇರಿಯಲ್ಲಿ ಜರುಗಿದ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿನಿಯನ್ನು ಡಿಡಿಪಿಐ ಅಂದಾನಪ್ಪ ವಡಿಗೇರಿ ಅವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕನ್ನಡ ವಿಷಯ ಪರಿವೀಕ್ಷಕ ಈರಪ್ಪ ಲಮಾಣಿ, ಚಂದ್ರಶೇಖರಯ್ಯ ಮಳಿಮಠ ಸೇರಿದಂತೆ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.