ಪಶು ಸಂಗೋಪನಾ ಸಚಿವರನ್ನು ಕೂಡಲೆ ಬದಲಿಸಿ: ಪ್ರಭು ಚವ್ಹಾಣ

ಸಂಜೆವಾಣಿ ವಾರ್ತೆ
ಬೀದರ್:ಫೆ.6: ರಾಜ್ಯದಲ್ಲಿ ಯಾವುದೇ ಅಡೆತಡೆಯಿಲ್ಲದೆ ಕಸಾಯಿಖಾನೆಗಳಿಗೆ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ. ಅವುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಆದರೆ, ಸರ್ಕಾರವಾಗಲಿ, ಪೆÇಲೀಸರಾಗಲಿ ಅದನ್ನು ತಡೆಯುವ ಕೆಲಸ ಮಾಡುತ್ತಿಲ್ಲ. ಪಶು ಸಂಗೋಪನೆ ಇಲಾಖೆಯ ಬಗ್ಗೆ ಸಚಿವ ವೆಂಕಟೇಶ್ ಅವರಿಗೆ ಏನೂ ಗೊತ್ತಿಲ್ಲ.
ಕೂಡಲೇ ಅವರನ್ನು ಬದಲಿಸಬೇಕು’ ಎಂದು ಔರಾದ್ ಬಿಜೆಪಿ ಶಾಸಕ ಪ್ರಭು ಚವಾಣ್ ಒತ್ತಾಯಿಸಿದರು.
ಸೋಮವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಅವರು, ಪಶು ಸಂಗೋಪನಾ ಸಚಿವ ವೆಂಕಟೇಶ್ ಅವರು ಇದುವರೆಗೆ ವಿಭಾಗ, ಜಿಲ್ಲೆಗಳಲ್ಲಿ ಸಭೆ ನಡೆಸಿಲ್ಲ. ಯಾವುದೇ ಜಿಲ್ಲೆಗೆ ಭೇಟಿ ಕೊಟ್ಟಿಲ್ಲ. ಇಲಾಖೆಯ ಬಗ್ಗೆ ಅವರಿಗೆ ಏನೂ ಗೊತ್ತಿಲ್ಲ. ಮುಖ್ಯಮಂತ್ರಿಯವರು ತಕ್ಷಣವೇ ಅವರನ್ನು ಬದಲಿಸಬೇಕು ಎಂದು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಜಾನುವಾರು ಹತ್ಯೆ ಮತ್ತು ಪ್ರತಿಬಂಧಕ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಅದಕ್ಕೆ ಪೂರಕವಾಗಿ ಅನೇಕ ಕ್ರಮಗಳನ್ನು ಜರುಗಿಸಲಾಗಿತ್ತು. ಚೆಕ್‍ಪೆÇೀಸ್ಟ್‍ಗಳನ್ನು ತೆರೆದು, ಗೋವುಗಳನ್ನು ಕಸಾಯಿಖಾನೆಗಳಿಗೆ ಸಾಗಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಈಗ ಆ ಕೆಲಸ ಆಗುತ್ತಿಲ್ಲ. ಜಾನುವಾರುಗಳ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವೆ. ಈ ಬಗ್ಗೆ ಬರುವ ಅಧಿವೇಶನದಲ್ಲಿ ಪ್ರಸ್ತಾಪಿಸುವೆ. ಇಲ್ಲವಾದರೆ ಜಾನುವಾರುಗಳೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಮ್ಮ ಸರ್ಕಾರವಿದ್ದಾಗ ನಾನು ಪಶು ಸಂಗೋಪನಾ ಸಚಿವನಾಗಿ ಗೋವುಗಳ ಹತ್ಯೆಗೆ ಕಾನೂನು ಜಾರಿಗೆ ತಂದಿದ್ದೆವು. ಗೋಮಾಳ ಜಮೀನಿನಲ್ಲಿ ಗೋಶಾಲೆ ಆರಂಭಿಸಲು ಅವಕಾಶ ಕಲ್ಪಿಸಿದ್ದೆ. ರಾಜ್ಯದಲ್ಲಿ 70 ಗೋಶಾಲೆಗಳ ಪೈಕಿ 52ಕ್ಕೆ ಜಾಗ ಗುರುತಿಸಲಾಗಿತ್ತು. 28 ಗೋಶಾಲೆ ಮಂಜೂರು ಮಾಡಿಸಿದ್ದೆ. 15ಕ್ಕೆ ಚಾಲನೆ ಕೊಟ್ಟಿದ್ದೆವು. ಪ್ರಾಣಿ ಕಲ್ಯಾಣ ಮಂಡಳಿ, ಪುಣ್ಯಕೋಟಿ ದತ್ತು ಯೋಜನೆ ಆರಂಭಿಸಿ ?27 ಕೋಟಿ ಅನುದಾನ ಕೊಟ್ಟಿದ್ದೆ. ಜಾನುವಾರುಗಳ ಚಿಕಿತ್ಸೆಗೆ ಆಂಬ್ಯುಲೆನ್ಸ್ ಸೇವೆ ಆರಂಭಿಸಿದ್ದೆವು. ಈಗ ಅವುಗಳನ್ನೆಲ್ಲ ಬಂದ್ ಮಾಡಿದ್ದಾರೆ. ಮೂಕ ಪ್ರಾಣಿಗಳ ಮೇಲೆ ಕಾಂಗ್ರೆಸ್ ಸರ್ಕಾರಕ್ಕೆ ಸಿಟ್ಟೇಕೆ ಎಂದು ಪ್ರಶ್ನಿಸಿದರು.
ಗೋವುಗಳ ಸಾಕಣೆ ಮಾಡುವವರಿಗೆ ನಮ್ಮ ಸರ್ಕಾರದ ಅವಧಿಯಲ್ಲಿ ಪೆÇ್ರೀತ್ಸಾಹ ಧನ ಕೊಡುತ್ತಿದ್ದೆವು. ಈಗ ಅದನ್ನು ಕೊಡುತ್ತಿಲ್ಲ. ಶೀಘ್ರ ಪೆÇ್ರೀತ್ಸಾಹ ಧನ ಕೊಡಬೇಕು. ಅಗತ್ಯ ಇರುವ ಕಡೆಗಳಲ್ಲಿ ಗೋಶಾಲೆಗಳನ್ನು ಆರಂಭಿಸಬೆಕು. ಕಸಾಯಿಖಾನೆಗಳನ್ನು ಬಂದ್ ಮಾಡಿಸಬೇಕು ಎಂದು ಒತ್ತಾಯಿಸಿದರು.
ಶಾಸಕರಾದ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಶರಣು ಸಲಗರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ, ಪಶು ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ವಸಂತ ಬಿರಾದಾರ, ಮುಖಂಡರಾದ ಅಶೋಕ ಹೊಕ್ರಾಣಿ, ವಿಜಯಕುಮಾರ ಪಾಟೀಲ ಗಾದಗಿ ಹಾಜರಿದ್ದರು.
9ರಂದು ಕಲ್ಯಾಣಕ್ಕೆ ಬಿಎಸ್‍ವೈ ‘ಸಣ್ಣಪುಟ್ಟ ಮತಭೇದಗಳಿವೆ’ ‘ಬೀದರ್ ಜಿಲ್ಲಾ ಬಿಜೆಪಿಯಲ್ಲಿ ಸಣ್ಣಪುಟ್ಟ ಮತಭೇದಗಳಿವೆ ಹೊರತು ಮನಭೇದಗಳಿಲ್ಲ’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಮಾರ್ಮಿಕವಾಗಿ ಹೇಳಿದರು. ‘ಜಿಲ್ಲೆಯಲ್ಲಿ ಬಿಜೆಪಿ ಒಡೆದ ಮನೆಯಾಗಿದೆಯಲ್ಲ’ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದ ಅವರು ನಗರದಲ್ಲಿ ಸೋಮವಾರ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚೆಗಳಾಗಿವೆ ಎಂದು ತಿಳಿಸಿದರು. ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಫೆ. 9ರಂದು ಬಸವಕಲ್ಯಾಣಕ್ಕೆ ಭೇಟಿ ನೀಡುವರು. ಅನುಭವ ಮಂಟಪದ ಕಾಮಗಾರಿ ವೀಕ್ಷಿಸಿ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಯುಪಿಎಗಿಂತ ಎನ್‍ಡಿಎ ಅವಧಿಯಲ್ಲಿ ಹೆಚ್ಚಿನ ಅನುದಾನ’ ಬಂದಿದೆ. ‘ಹಿಂದಿನ ಕೇಂದ್ರದ ಯುಪಿಎ ಸರ್ಕಾರಕ್ಕಿಂತ ಹಾಲಿ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಹೆಚ್ಚಿನ ಅನುದಾನ ಬಂದಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುತ್ತಿದ್ದಾರೆ’ ಎಂದು ಶಾಸಕ ಡಾ. ಶೈಲೇಂದ್ರ ಕೆ.ಬೆಲ್ದಾಳೆ ಹೇಳಿದರು.
2004ರಿಂದ 2014ರ ವರೆಗೆ ದೇಶದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ?60 ಸಾವಿರ ಕೋಟಿ ಅನುದಾನ ಬಂದಿದೆ. ?81 ಸಾವಿರ ಕೋಟಿ ತೆರಿಗೆ ಹಂಚಿಕೆ ಅನುದಾನ ಬಂದಿತ್ತು. ಕಳೆದ ಹತ್ತು ವರ್ಷಗಳ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ?2.36 ಲಕ್ಷಕೋಟಿ ಅನುದಾನ ಬಂದಿದೆ. ತೆರಿಗೆ ಹಂಚಿಕೆ ಅನುದಾನ ?2.82 ಲಕ್ಷ ಕೋಟಿ ಬಂದಿದೆ ಎಂದು ಅಂಕಿ ಅಂಶ ಬಿಚ್ಚಿಟ್ಟರು.
ಮೂವರು ಪ್ರಧಾನ ಕಾರ್ಯದರ್ಶಿಗಳ ನೇಮಕ ‘
ಬೀದರ್ ಜಿಲ್ಲಾ ಬಿಜೆಪಿಗೆ ಮೂವರನ್ನು ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. ಬೀದರ್ ತಾಲ್ಲೂಕಿನಿಂದ ಕುರುಬ ಸಮಾಜದ ಪೀರಪ್ಪ ಔರಾದೆ ಔರಾದ್‍ನಿಂದ ಲಿಂಗಾಯತ ಸಮಾಜದ ಕಿರಣ ಪಾಟೀಲ ಹಕ್ಯಾಳ ಬಸವಕಲ್ಯಾಣದಿಂದ ಮರಾಠ ಸಮಾಜದ ಮಾಧವ ಹೊಸೂರೆ ಅವರನ್ನು ನೇಮಿಸಲಾಗಿದೆ’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ತಿಳಿಸಿದರು.