ಪಶ್ಚಿಮ ಬಂಗಾಳದಲ್ಲಿ ತ್ರಿಕೋನಾ ಸ್ಪರ್ದೆ: ಬಿ.ಕೆ ಹರಿಪ್ರಸಾದ್

ಕೋಲ್ಕತಾ,ಏ. 13- ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ, ಬಿಜೆಪಿ, ಟಿಎಂಸಿ ನಡುವೆ ತ್ರಿಕೋನ ಸ್ಪರ್ಧೆ ಇದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ‌‌ ಹರಿಪ್ರಸಾದ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಆಢಳಿತಾರೂಡ ಟಿಎಂಸಿ ಮತ್ತು ಬಿಜೆಪಿ ವಿರುದ್ದ ಜನಾಕ್ರೋಶ ವ್ಯಕ್ತ ವಾಗಿದೆ.‌ಹೀಗಾಗಿ ಕಾಂಗ್ರೆಸ್ ‌ಮತ್ತು ಎಡಪಕ್ಷಗಳ ನೇತೃತ್ವದ ಸಂಯುಕ್ತ ಮೈತ್ರಿಗೆ ಜನರ ಒಲವು ಹೆಚ್ಚಾಗಿದೆ ಎಂದು ಅವರು ಪಶ್ಚಿಮ ಬಂಗಾಳದ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಆಗಿರುವ ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆನ್ನು ಗಂಬೀರವಾಗಿ ತೆಗೆದುಕೊಂಡಿಲ್ಲ‌ ಎನ್ನುವ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ.‌ಇದೊಂದು ಆರ್ ಎಸ್ ಎಸ್ ಒಳಸಂಚು,ನಾಗಪುರ ವಿಶ್ವವಿದ್ಯಾಲಯ ಜನರನ್ನು ತಪ್ಪುದಾರಿಗೆ ಎಳೆಯುತ್ತಿದೆ ಎಂದು ಅವರು ದೂರಿದ್ದಾರೆ.

ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿರುವ ಹರಿಪ್ರಸಾದ್, ಮುಂಬುರುವ ಹಂತದ ಚುನಾವಣೆಯಲ್ಲಿ ಕಾಂಗ್ರೆಸ್ ನ‌ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪಶ್ಚಿಮ‌ ಬಂಗಾಳ‌ ವಿಧಾನಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರು ಮುಂದಿನ ಹಂತದಲ್ಲಿ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಟಿಎಂಸಿ ಪಕ್ಷದ ಜೊತೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳಲಿದೆ ಎನ್ನುವ ಕುರಿತು ಪ್ರತಿಕ್ರಿಯಿಸಿರುವ ಅವರು ಇದೊಂದು ಊಹಾಪೋಹದ ಪ್ರಶ್ನೆ.ಸದ್ಯಕ್ಕೆ ಇಂತಹ ಯಾವುದೇ ಪರಿಸ್ಥಿತಿ ನಿರ್ಮಾಣವಾಗಲ್ಲ ಎಂದು ಹೇಳಿದ್ದಾರೆ.

ಚುನಾವಣೆ ಫಲಿತಾಂಶದ ಬಳಿಕ ಶಾಸಕರು ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಚರ್ಚಿಸಿ ಮುಂದೇನು ಮಾಡಬೇಕು ಎನ್ನುವ ನಿರ್ಧಾರಕ್ಕೆ ಬರಲಿದ್ದಾರೆ. ಆನಂತರ ಪಕ್ಷದ ಹೈಕಮಾಂಡ್ ಈ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮಾತ್ರ ಸ್ಪರ್ಧೆ ಇದೆ ಎನ್ನುವ ರೀತಿ ಮಾಧ್ಯಮಗಳಲ್ಲಿ ಬಿಂಬಿತವಾಗುತ್ತದೆ ಅಷ್ಟೇ ಆದರೆ ಅಸಲಿ ವಿಷಯವೇ ಬೇರೆ. ಪಶ್ಚಿಮಬಂಗಾಳದಲ್ಲಿ ತ್ರಿಕೋನ ಸ್ಪರ್ಧೆ ಇದೆ ಎಂದು ಅವರು ತಿಳಿಸಿದ್ದಾರೆ.

ಎನ್ ಆರ್ ಸಿ ಚಕಾರವಿಲ್ಲ:

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸಿ ಎಎ ,ರೈತರ ಮತ್ತು ಎನ್ ಆರ್ ಸಿ ಬಗ್ಗೆ ಯಾಕೆ ಚಕಾರ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ನಿಜಕ್ಕೂ ಇಬ್ಬರು ನಾಯಕರಿಗೆ ಧೈರ್ಯವಿದ್ದರೆ ಈ ವಿಷಯಗಳ ಬಗ್ಗೆ ಪ್ರಸ್ತಾಪ ಮಾಡಲಿ ಎಂದು ಅವರು ಸವಾಲು ಹಾಕಿದ್ದಾರೆ

ಚುನಾವಣಾ ಉಸ್ತುವಾರಿ

ಪಶ್ಚಿಮ ಬಂಗಾಳದ ಚುನಾವಣಾ ಉಸ್ತುವಾರಿಯಾಗಿದ್ದ ಜಿತಿನ್ ಪ್ರಸಾದ್ ಅವರಿಗೆ ಕೊರೋನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಅದರ ಜವಾಬ್ದಾರಿಯನ್ನು ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಅವರಿಗೆ ಪಕ್ಷದ ಹೈಕಮಾಂಡ್ ವಹಿಸಿದೆ.

ಟಿಎಂಸಿ ಮತ್ತು ಬಿಜೆಪಿ ಪಕ್ಷಗಳು ವಿಚಲಿತರಾಗಿವೆ ಎಂದು ಕೂಡ ಅವರು ಆರೋಪ ಮಾಡಿದ್ದಾರೆ