
ಕೊಲ್ಕತ್ತ, ಮೇ.8- ದೇಶದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ದಿ ಕೇರಳ ಸ್ಟೋರಿ ಚಿತ್ರ ಪ್ರದರ್ಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಶ್ಚಿಮ ಬಂಗಾಳ ಸರ್ಕಾರ ನಿಷೇಧಿಸಿದೆ.
ಈ ಚಿತ್ರ ಪ್ರದರ್ಶನದಿಂದ ಯಾವುದೇ ಅಹಿತಕರ ಘಟನೆಗೆ ಅವಕಾಶವಾಗಬಾರದು ಎಂಬ ಕಾರಣಕ್ಕಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಆದೇಶ ಹೊರಡಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿಷೇಧ ಉಲ್ಲಂಘಿಸಿ ರಾಜ್ಯದ ಯಾವುದೇ ಚಿತ್ರಮಂದಿರದಲ್ಲಿ ದಿ ಕೇರಳ ಸ್ಟೋರಿ ಚಿತ್ರ ಪ್ರದರ್ಶಿಸಿದರೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇದಕ್ಕೂ ಮುನ್ನ ಮಮತಾ ಅವರು ದಿ ಕೇರಳ ಸ್ಟೋರಿ ವಿಕೃತ ಭಾವನೆಯಿಂದ ಕೂಡಿದೆ. ಈ ಚಿತ್ರ ಕೇರಳ ರಾಜ್ಯವನ್ನು ಅವಮಾನಗೊಳಿಸುತ್ತಿದೆ ಎಂದು ಬಣ್ಣಿಸಿದ್ದರು.
ಸುದೀಪ್ತೋ ಸೇನ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಕೇರಳದಿಂದ ಮಹಿಳೆಯರನ್ನು ಇಸ್ಲಾಂ ಧರ್ಮಕ್ಕೆ ಪರಿವರ್ತಿಸಿ ಇಸ್ಲಾಂ ಸ್ಡೇಟ್ ಉಗ್ರಗಾಮಿ ಸಂಘಟನೆಗೆ ನೇಮಕಾತಿ ಮಾಡಿಕೊಳ್ಳುತ್ತದೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ. ಈ ಅಂಶದಿಂದಾಗಿ ಕೇರಳ ಸ್ಟೋರಿ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.