ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ 200 ಸ್ಥಾನ: ಅಮಿತ್ ಶಾ

ಕೋಲ್ಕತಾ, ಮಾ. 28- ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಇನ್ನೂರಕ್ಕೂ ಹೆಚ್ಚು ಸ್ಥಾನಗಳಲ್ಲಿ ಸುಲಭವಾಗಿ ಜಯಗಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ಪಡಿಸಿದ್ದಾರೆ.

ಮೊದಲ ಹಂತದ ಚುನಾವಣೆ ನಡೆದಿರುವ ಪಶ್ಚಿಮಬಂಗಾಳದ 30 ಕ್ಷೇತ್ರಗಳ ಪೈಕಿ ಬಹುಪಾಲು ಕ್ಷೇತ್ರ ಹಾಗೂ ಅಸ್ಸಾಂನ 47 ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಮತ್ತೊಮ್ಮೆ ತೃಣಮೂಲ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನೋಡಿರಬಹುದೆಂದು ಸುಲಭವಾಗಿ 200 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿಲಿದೆ ಎಂದು ಹೇಳಿರುವುದು ಕುತೂಹಲ ಕೆರಳಿಸಿದೆ.

ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಬಿಜೆಪಿ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಪಶ್ಚಿಮಬಂಗಾಳದಲ್ಲಿ ಮೊದಲ ಹಂತದಲ್ಲಿ 30 ಪತ್ರಗಳ ಪೈಕಿ 26 ಕ್ಷೇತ್ರದಲ್ಲಿ ಹಾಗೂ ಅಸ್ಸಾಂನ 47 ಕ್ಷೇತ್ರಗಳ ಪೈಕಿ 37 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಸುಲಭವಾಗಿ ಗೆಲ್ಲಲಿದೆ ಎಂದು ಅವರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಬಿಜೆಪಿ ಶತಾಯಗತಾಯ ಅಧಿಕಾರ ಹಿಡಿಯಲಿದೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿರುವ ಅವರು ಇದೇ ಮೊದಲ ಬಾರಿಗೆ ಪಶ್ಚಿಮಬಂಗಾಳದಲ್ಲಿ ಕೇಸರಿ ಬಾವುಟ ಹಾರಾಡಲಿದೆ ಎಂದು ತಿಳಿಸಿದ್ದಾರೆ.

ಅಸ್ಸಾಂ ನಲ್ಲಿ ಅದಿಕಾರ:

ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬರುವ ಜೊತೆಗೆ ಆಸನ ಎರಡನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ