ಪಾಕ್ ನಲ್ಲಿ ಹಿಂದೂ ದೇವಾಲಯ ಧ್ವಂಸ: 45 ಮಂದಿ ಬಂಧನ

ಪೇಶಾವರ, ಜ 3- ಪಾಕಿಸ್ತಾನದಲ್ಲಿ ‌ಹಿಂದೂ ದೇವಾಲಯ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 45 ಜನರನ್ನು ಪೊಲೀಸರು ಮದೀಬಂಧಿಸಿದ್ದಾರೆ.‌ವಾಯುವ್ಯ ಪಾಕಿಸ್ತಾನದಲ್ಲಿ ಈ ಘಟನೆ ಸಂಭವಿಸಿತ್ತು.
ಪ್ರಕರಣದಲ್ಲಿ ಇದುವರೆಗೆ 100 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.
ತೈಬರ್ ಪ್ರಖ್ತುಂಖ್ಚ ತೆರಿ‌‌ ಗ್ರಾಮದಲ್ಲಿರುವ ದೇವಾಲಯವನ್ನು ಡಿ.30ರಂದು, ಧ್ವಂಸಗೊಳಿಸಲಾಗಿತ್ರು. ಜಮಿಯತ್ ಉಲೆಮಾ ಇ – ಇಸ್ಲಾಂ ಪಕ್ಷದ ಸದಸ್ಯರು ಈ ಪ್ರಕರಣದಲ್ಲಿ ಙಾಗಿಯಾಗಿದ್ದು 300ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿತ್ತು
ದ ದ ಗ್ರ ವರ್ಗ ಗಗಹಿಂದೂ ದೇವಾಲಯದ ನವೀಕರಣವನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ಜಮಿಯತ್ ಉಲೆಮಾ-ಇ-ಇಸ್ಲಾಂ ಪಕ್ಷದ ಬೆಂಬಲಿಗರು ದೇವಾಲಯವನ್ನು ಧ್ವಂಸಗೊಳಿಸಿದ್ದಾರೆ ಎಂದು ಪಾಕಿಸ್ತಾನಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಭಾರತೀಯ ರಾಯಭಾರಿ ಕಚೇರಿಯು ಜನವರಿ 1ರಂದು ಪ್ರತಿಭಟನೆ ವ್ಯಕ್ತಪಡಿಸಿತ್ತು. ಮಾನವ ಹಕ್ಕುಗಳ ಹೋರಾಟಗಾರರು ಘಟನೆಯನ್ನು ಖಂಡಿಸಿದ್ದರು.
ಅಧಿಕೃತ ಅಂದಾಜಿನ ಪ್ರಕಾರ, 75 ಲಕ್ಷ ಹಿಂದೂಗಳು ಪಾಕಿಸ್ತಾನದಲ್ಲಿ ನೆಲೆಸಿದ್ದಾರೆ. ಆದರೆ, ಸಮುದಾಯದ ಪ್ರಕಾರ, ದೇಶದಲ್ಲಿ 90 ಲಕ್ಷಕ್ಕೂ ಹೆಚ್ಚು ಹಿಂದೂಗಳು ವಾಸಿಸುತ್ತಿದ್ದಾರೆ.