ಪಾಕ್ ಪರ ಗೂಢಾಚಾರಿಕೆ ಓರ್ವನ ಬಂಧನ

ಜೈಪುರ,ಜ.೧೧-ರಾಜಾಸ್ತಾನದ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಪರವಾಗಿ ಗೂಢಾಚಾರಿಕೆ ಮಾಡುತ್ತಿದ್ದ ೪೨ ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಜೈಸಲ್ಮರ್ ನಿವಾಸಿ ಸತ್ಯನಾರಾಯಣನ್ ಪಾಲಿವಾಲ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಗೂಢಾಚಾರಿಕೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಬಂಧಿತ ಆರೋಪಿ ಭಾರತೀಯ ಸೇನೆಗೆ ಸೇರಿದ ಕೆಲವೊಂದು ಮಹತ್ವದ ಮಾಹಿತಿಯನ್ನು ಪಾಕಿಸ್ತಾನದ ಜತೆ ಹಂಚಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಚಾರಣೆ ವೇಳೆ ಪಾಕಿಸ್ತಾನ ಬೇಹುಗಾರಿಕಾ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದು, ಸೇನೆಗೆ ಸಂಬಂಧಿಸಿದ ಸೂಕ್ಷ್ಮಮಾಹಿತಿಗಳನ್ನು ಸಂಗ್ರಹಿಸಿದ ವಿಷಯವನ್ನು ಬಹಿರಂಗಪಡಿಸಿದ್ದಾರೆ.