ಪಾಟೀಲ್ ವಿರುದ್ಧ ಮಾಡಿರುವ ಆರೋಪ ಸುಳ್ಳು

ಅಫಜಲಪುರ:ಜೂ.15: ಜಿ.ಪಂ ಮಾಜಿ ಸದಸ್ಯ ಅರುಣಕುಮಾರ ಎಂ.ವೈ ಪಾಟೀಲ್ ವಿರುದ್ಧ ರಾಜಕೀಯ ವಿರೋಧಿಗಳು ಅವರ ವ್ಯಕ್ತಿತ್ವಕ್ಕೆ ಕುಂದು ತರುವ ಕೆಲಸ ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರಣು ಕುಂಬಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣಕುಮಾರ ಪಾಟೀಲ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಟಿಕೆಟ್ ತಪ್ಪಿಸಿದ್ದಾರೆ.

ತದನಂತರ ಇದೀಗ ಶಿಕ್ಷಕರೊಬ್ಬರ ಜೊತೆ ಅರುಣಕುಮಾರ ಪಾಟೀಲ್ ಅವರು ಸುಮಾರು 30 ನಿಮಿಷಗಳ ಕಾಲ ಹೆಚ್ಚು ಸಮಯ ಮಾತನಾಡಿರುವ ಆಡಿಯೋದಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಕುರಿತಂತೆ ಕೆಲವೇ ಮಾತುಗಳನ್ನು ಮಾತ್ರ ಹೈಲೈಟ್ ಮಾಡಿ ಸುದ್ದಿ ಮಾಧ್ಯಮಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ.

ಇದೊಂದು ಕುತಂತ್ರ ಷಡ್ಯಂತರವಾಗಿದ್ದು ಸುಳ್ಳು ಆರೋಪವಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಎರಡು ಕಡೆಯಿಂದ ಕೂಲಂಕುಶವಾಗಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.