ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಕಟ್ಟು ನಿಟ್ಟಿನ ಸೂಚನೆ- ಎಡಿಸಿ

ರಾಯಚೂರು,ಆ.೦೪- ಜಿಲ್ಲೆಯಲ್ಲಿ ಆ.೭ರ ಭಾನುವಾರ ದಂದು ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ಪರೀಕ್ಷೆ ನಡೆಯದಿದ್ದು, ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಮತ್ತು ಪಾರದರ್ಶಕವಾಗಿ ನಡೆಸುವಂತೆ ಅಪಾರ ಜಿಲ್ಲಾಧಿಕಾರಿ ದುರುಗೇಶ್ ಕೆ.ಆರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಅವರಿಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೆಪಿಟಿಸಿಎಲ್ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಒಟ್ಟಾರೆ ೩೨ ಕೇಂದ್ರಗಳಲ್ಲಿ ಪರೀಕ್ಷೆ ನಡೆಯತಿದ್ದು, ರಾಯಚೂರು ೨೪, ಮಾನ್ವಿ ೫ ಮತ್ತು ದೇವದುರ್ಗ ೩ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಬಂದರೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ತಡವಾಗಿ ಬಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬಾರದು ಎಂದು ಸೂಚನೆ ನೀಡಿದರು.ಪರೀಕ್ಷೆ ಕೊಠಡಿಗಳಲ್ಲಿ ಸಿಸಿ ಕ್ಯಾಮೆರಾ ಮತ್ತು ಗೋಡೆ ಗಡಿಯಾರವನ್ನು ಕಡ್ಡಾಯವಾಗಿ ಅಳವಡಿಸಬೇಕು. ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಸೂಚನೆ ನೀಡಿದರು.
ಪರೀಕ್ಷೆ ಕೇಂದ್ರಗಳಿಗೆ ತನಿಖೆ ತಂಡ ಬರುವ ಸಾಧ್ಯತೆವಿದ್ದು, ಕ್ಲಾಸ್ ಒನ್ ಅಧಿಕಾರಿಗಳು ಹಾಗೂ ಮಾರ್ಗಸೂಚಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ಸೋಮಶೇಖರ್, ಪಶುಪಾಲನ ಪಶು ಸಂಗೋಪನ ಇಲಾಖೆ ಅಧಿಕಾರಿ ಶಿವಣ್ಣ, ಕೃಷಿ ಇಲಾಖೆ ಜಂಟಿ ಅಧಿಕಾರಿ ದೇವಿಕಾ, ವಿವಿಧ ತಾಲೂಕು ತಹಶೀಲ್ದಾರ್, ಬಿಒಗಳು ಸೇರಿದಂತೆ ಉಪಸ್ಥಿತರಿದ್ದರು.