ಪಾಲಕರನ್ನು ಗೌರವಿಸುವಂತೆ ಬೆಳಮಗಿ ಸಲಹೆ

ಬೀದರ:ಡಿ.3: ಮಕ್ಕಳು ತಂದೆ-ತಾಯಿ, ಗುರು-ಹಿರಿಯರನ್ನು ಗೌರವಿಸಬೇಕು ಎಂದು ಬ್ಲಾಕ್ ಸಂಪನ್ಮೂಲ ಸಂಯೋಜಕ ವಿಜಯಕುಮಾರ ವಿ. ಬೆಮಳಗಿ ಸಲಹೆ ಮಾಡಿದರು.

ಬೀದರ್ ತಾಲ್ಲೂಕಿನ ಹಮಿಲಾಪುರದ ವಿ.ಎಂ. ರಾಂಪುರೆ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆದರ್ಶ ಪ್ರಜೆಗಳಾಗಲು ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಅರಿಯಬೇಕು. ನೈತಿಕತೆ, ವಿನಯ, ವಿಧೇಯತೆ, ಸಹನೆ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ರಾಂಪುರೆ ಶಾಲೆಯು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸಂಸ್ಕಾರದೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದು ನುಡಿದರು.

ರಾಂಪುರೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹೇಶ ರಾಂಪುರೆ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳ ಭವಿಷ್ಯ ಉಜ್ವಲಗೊಳಿಸುವುದು ಶಿಕ್ಷಣ ಸಂಸ್ಥೆಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಂಸ್ಥೆಯಲ್ಲಿ ಅತ್ಯಂತ ಕಡಿಮೆ ಶುಲ್ಕದಲ್ಲಿ ಸ್ಪರ್ಧಾತ್ಮಕ ಶಿಕ್ಷಣ ನೀಡಲಾಗುತ್ತಿದೆ. ಕೋವಿ???ನಿಂದ ಪಾಲಕರನ್ನು ಕಳೆದುಕೊಂಡ ಹಾಗೂ ಬಡ ಮಕ್ಕಳಿಗೆ ಉಚಿತ ಶಿಕ್ಷಣ ಕೊಡಲಾಗುತ್ತಿದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಇಸಿಒ ಸಚ್ಚಿದಾನಂದ, ಗಾದಗಿ ಕ್ಲಸ್ಟರ್ ಸಿಆ???ಪಿ ಮಾಣಿಕರಾವ್ ಪವಾರ್, ಕೊಳಾರ ಸಿಆರ್‍ಪಿ ಸುನೀಲಕುಮಾರ ಉಪಸ್ಥಿತರಿದ್ದರು.

ನೃತ್ಯ ಸೇರಿದಂತೆ ಮಕ್ಕಳು ಪ್ರದರ್ಶಿಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಶಾಲೆ, ತರಗತಿವಾರು ಟಾಪರ್, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಅರ್ಪಿತಾ, ಆಶ್ರಯ ಪ್ರಾರ್ಥನೆ ಗೀತೆ ಹಾಡಿದರು. ಆಶ್ವಜೀತ್ ಸೋನಿ ನಿರೂಪಿಸಿದರು