ಪಾಲಣ್ಣಗೆ ಶ್ರೇಷ್ಠ ವರ್ತಕ ಪ್ರಶಸ್ತಿ

(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ ಸೆ 26 : ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯಿಂದ ಒ್ರತಿ ವರ್ಷ ಕೊಡಮಾಡುವ ಶ್ರೇಷ್ಠ ವರ್ತಕ ಪ್ರಶಸ್ತಿಯನ್ನು ಬುಡಾ ಅಧ್ಯಕ್ಷ ಪಿ.ಪಾಲಣ್ಣ ಅವರಿಗೆ ನಿನ್ನೆ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರು ಪ್ರಧಾನ‌ ಮಾಡಿದ್ದಾರೆ.
ಗದಗನಲ್ಲಿ‌ ನಿನ್ನೆ ನಡೆದ ಉತ್ತರ ಕರ್ನಾಟಕ ವಾಣಿಜ್ಯೋದ್ಯಮಿಗಳ ವಾರ್ಷಿಕ ಸಮ್ಮೇಳನದಲ್ಲಿ ವ್ಯಾಪಾರ, ಉದ್ಯಮ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಿದೆ.