ಪಾಲನೆಯಾಗದ ಕೋವಿಡ್ ನಿಯಮ

ಗಬ್ಬೂರು.ಡಿ.೨೨-ಪಟ್ಟಣದಲ್ಲಿ ಟಂ ಟಂ, ಮ್ಯಾಕ್ಸಿಕ್ಯಾಬ್ ಹಾಗೂ ಗೂಡ್ಸ್ ವಾಹನಗಳಲ್ಲಿ ಒತ್ತೊತ್ತಾಗಿ ಜನರನ್ನು ತುಂಬಿಕೊಂಡು ಸಾಗಿಸಲಾಗುತ್ತಿದೆ. ಇದರಿಂದ ಕೋವಿಡ್ ಪ್ರಕರಣಗಳು ಹೆಚ್ಚುವ ಆತಂಕ ಇದೆ. ಕೋವಿಡ್ ನಿಯಮಗಳ ಪಾಲನೆ ಆಗುತ್ತಿಲ್ಲ.ಪ್ರಯಾಣಿಕರನ್ನು ಕುರಿಗಳಂತೆ ತುಂಬಿಕೊಂಡು ಹೋಗಲಾಗುತ್ತಿದೆ.
ಪ್ರಯಾಣಿಕರು ಮಾಸ್ಕ ಧರಿಸಿರುವುದಿಲ್ಲ. ಅಂತರ ಕಾಯುವುದು ಅಸಾಧ್ಯ. ಗ್ರಾಮ ಪಂಚಾಯತಿ ಎಲೆಕ್ಷನ್ ಸೇರಿದಂತೆ ಮದುವೆ, ಸಭೆ, ಸಮಾರಂಭಗಳಲ್ಲಿ ೧೦೦ ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂಬ ನಿಯಮವಿದ್ದರೂ ಪಾಲನೆ ಆಗುತ್ತಿಲ್ಲ. ’ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಾಗಿ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.