ಪಾಲಿಕೆ:ಎಲ್ಲಾ ವಾರ್ಡುಗಳಲ್ಲಿ ಜೆಡಿಎಸ್ ಸ್ಪರ್ಧೆ:ತಾಯಣ್ಣ

ಬಳ್ಳಾರಿ, ಏ.04: ನಗರದ 39 ವಾರ್ಡುಗಳಲ್ಲಿಯೂ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲಿದೆ. ಈಗಾಗಲೇ 20 ವಾರ್ಡುಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು ನಾಳೆ ಪ್ರಕಟಿಸಲಿದೆ ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೀನಳ್ಳಿ ತಾಯಣ್ಣ ಹೇಳಿದ್ದಾರೆ.
ಇಂದು ಸಂಜೆವಾಣಿಯೊಂದಿಗೆ ಮಾತನಾಡಿದ ಅವರು, ನಗರದ 39 ವಾರ್ಡುಗಳಲ್ಲಿ ನಮ್ಮ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಚುನಾವಣೆ ಸಿದ್ಧತೆಗಾಗಿ ನಾಳೆ ನಗರದ ಜಿಲ್ಲಾ ಕಛೇರಿಯಲ್ಲಿ ಪಕ್ಷದ ಮುಖಂಡರ ಆಕಾಂಕ್ಷಿಗಳ ಸಭೆ ಕರೆದಿದೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆಡಳಿತ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳು ಅವರ ಮುನ್ನೋಟವನ್ನು ಜನರ ಮುಂದಿಟ್ಟು ಮತಯಾಚನೆ ಮಾಡಲಿದೆಂದು ತಿಳಿಸಿದರು.