ಪಾಲಿಕೆಯ ಹೊಸ ಕಟ್ಟಡದಲ್ಲಿ ದಕ್ಷಿಣ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿ

ಕಲಬುರಗಿ,ಏ.1-ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 44-ಗುಲಬರ್ಗಾ ದಕ್ಷಿಣ ವಿಧಾನಸಭೆ ಚುನಾವಣಾಧಿಕಾರಿಗಳ ಕಾರ್ಯಲಯವನ್ನು ಕಲಬುರಗಿ ಮಹಾನಗರ ಪಾಲಿಕೆಯ ಹೊಸ ಕಟ್ಟಡದ 1ನೇ ಮಹಡಿ, ದಕ್ಷಿಣ ದ್ವಾರದಲ್ಲಿರುವ ಕೊಠಡಿ ಸಂಖ್ಯೆ 18ರಲ್ಲಿ ಸ್ಥಾಪಿಸಲಾಗಿದೆ.
ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದ ವಿಷಯಗಳಿಗೆ ಹಾಗೂ ನಾಮಪತ್ರ ಸಲ್ಲಿಸಲು ಈ ಕಚೇರಿಗೆ ಸಂಪರ್ಕಿಸಬಹುದೆಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಮಹಾನಗರ ಪಾಲಿಕೆಯ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.