ಪಾಲಿಕೆ ಚುನಾವಣೆ ಜು. ೨೮ಕ್ಕೆ ಮುಂದೂಡಿಕೆ

ನವದೆಹಲಿ, ಜು.೨೬- ನೆನೆಗುದಿಗೆ ಬಿದ್ದಿರುವ ಬಿಬಿಎಂಪಿ ಚುನಾವಣೆ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮತ್ತೆ ಜು. ೨೮ಕ್ಕೆ ಮುಂದೂಡಿದೆ.
ಬಿಬಿಎಂಪಿ ಚುನಾವಣೆ ನಡೆಸುವ ಸಂಬಂಧ ಇಂದು ಎಂಟು ವಾರಗಳ ಗಡುವು ಅಂತ್ಯವಾದ ಹಿನ್ನಲೆಯಲ್ಲಿ ನ್ಯಾಯಮೂರ್ತಿ ಎ.ಎಂ.ಕಾನ್ವಿಲ್ಕರ್ ನೇತೃತ್ವದ ಪೀಠ ಇಂದು ವಿಚಾರಣೆ ನಡೆಸಿ ಗುರುವಾರಕ್ಕೆ ಮುಂದೂಡಿದರು.ಇದೇ ವೇಳೆ ಮಹಾರಾಷ್ಟ್ರ, ದೆಹಲಿ, ಮಧ್ಯಪ್ರದೇಶ ಪಾಲಿಕೆ ಚುನಾವಣೆ ವಿಚಾರವೂ ಪ್ರಸ್ತಾಪಿಸಲಾಗುತ್ತಿದೆ.
ಸುಪ್ರೀಂಕೋರ್ಟ್‌ನಲ್ಲಿ ಕೇಸ್ ನಂಬರ್ ೧೪ ಪಾಲಿಕೆ ಚುನಾವಣೆ ವಿಚಾರಣೆಯನ್ನು, ನ್ಯಾಯಮೂರ್ತಿಗಳಾದ ಎ.ಎಂ.ಕಾನ್ವಿಲ್ಕರ್, ಅಭಯ್ ಎಸ್.ಓಕಾ ಮತ್ತು ಜೆ.ಪಿ. ಪರ್ದಿವಾಲ ಪೀಠದ ಮುಂದೆ ವಿಚಾರಣೆ ನಡೆಯಿತು. ಆದರೆ, ಸಾಲಿಸಿಟರ್ ಜನರಲ್ ಅನಾರೋಗ್ಯ ಹಿನ್ನೆಲೆ ಗೈರಾದ ಕಾರಣ ಜು. ೨೮ಕ್ಕೆ ವಿಚಾರಣೆ ಮುಂದೂಡಿದರು.
ಇನ್ನು, ಸುಪ್ರೀಂಕೋರ್ಟ್ ಸರ್ಕಾರಕ್ಕೆ ನೀಡಿದ್ದ ೮ ವಾರಗಳ ಗಡುವು ಮುಕ್ತಾಯಗೊಂಡಿದ್ದು, ವಾರ್ಡ್ ಪುನರ್ ವಿಂಗಡನೆ & ವಾರ್ಡ್ ವಾರು ಮೀಸಲಾತಿ ಪ್ರಕಟಿಸಿದೆ. ಸುಪ್ರೀಂಕೋರ್ಟ್ ನೀಡಿದ್ದ ೮ ವಾರಗಳು ಮುಗಿದ ಹಿನ್ನೆಲೆ ಮತ್ತೆ ವಿಚಾರಣೆ ನಡೆಯಲಿದ್ದು, ವಾರ್ಡ್ ಪುನರ್ ವಿಂಗಡಣೆ ಮಾತ್ರ ಮಾಡಿ ಮೀಸಲಾತಿ ಪ್ರಕಟಿಸದೆ ವಿಳಂಬಧೋರಣೆ ಅನುಸರಿಸಿದೆ.
ಮತ್ತೊಂದೆಡೆ, ಕರ್ನಾಟಕ ಸರ್ಕಾರವು ಚುನಾವಣೆ ನಡೆಸಲು ಮತ್ತಷ್ಟು ಕಾಲಾವಕಾಶ ಕೋರುವ ಸಾಧ್ಯತೆಯಿದೆ. ಬಿಬಿಎಂಪಿ ವಾರ್ಡ್‌ಗಳ ಪುನರ್ ವಿಂಗಡನೆಯಾದರೂ ಮೀಸಲಾತಿ ನಿಗದಿಪಡಿಸಿ ಈವರೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿಲ್ಲ. ಹೀಗಾಗಿ ಮೀಸಲಾತಿ ಅಂತಿಮಗೊಳಿಸಲು ಕನಿಷ್ಠ ನಾಲ್ಕು ವಾರಗಳ ಸಮಯ ಕೇಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವ ಮಾಜಿ ಕಾರ್ಪೊರೇಟರ್‌ಗಳು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಮಾಜಿ ಕಾರ್ಪೊರೇಟರ್ ಶಿವರಾಜ್, ಅಬ್ದುಲ್ ವಾಜೀದ್ ರಿಂದ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ವಾದವನ್ನು ವಿರೋಧಿಸಿ, ಶೀಘ್ರ ಚುನಾವಣೆಗೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.