ಪಾಲಿಕೆ ನಿಯೋಗದಿಂದ ಮುಖ್ಯಮಂತ್ರಿಗಳೊಂದಿಗೆ ಚರ್ಚೆ


ದಾವಣಗೆರೆ ನ.೧೩; ದಾವಣಗೆರೆ ಮಹಾನಗರಪಾಲಿಕೆ ನಿಯೋಗವು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಇವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಜಿ.ಎಂ.ಸಿದ್ದೇಶ್ವರ, ಮಾಜಿ ಸಚಿವರು ಹಾಗೂ ಶಾಸಕರಾದ ಎಸ್.ಎ.ರವೀಂದ್ರನಾಥ, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ, ಮಹಾನಗರಪಾಲಿಕೆ ಮೇಯರ್ ಬಿ.ಜಿ.ಅಜಯಕುಮಾರ್, ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು