ಪಾಲಿಕೆ ಮೇಯರ್ ಗೆ ಕೋವಿಡ್ ದೃಢ

ಮೈಸೂರು,ಏ.2:- ದಿನೇ ದಿನೇ ಸಾಂಸ್ಕøತಿಕ ನಗರಿಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಮೈಸೂರು ಮಹಾನಗರ ಪಾಲಿಕೆಯ ಮೇಯರ್ ರುಕ್ಮಿಣಿ ಮಾದೇಗೌಡ ಮತ್ತವರ ಪತಿ ಜಿ.ಪಂ ಸದಸ್ಯ ಮಾದೇಗೌಡ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಕೊರೋನಾ ತಪಾಸಣೆಗೊಳಪಟ್ಟಿದ್ದ ದಂಪತಿಗಳ ವರದಿ ಪಾಸಿಟಿವ್ ಎಂಬುದು ದೃಢಪಟ್ಟಿದೆ. ಮೊನ್ನೆಯಷ್ಟೇ ಆಡಳಿತ ತರಬೇತಿ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದು, ಪಾಲಿಕೆಯ ಆಯುಕ್ತರಾದ ಶಿಲ್ಪಾ ನಾಗ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೀಗ ಮೇಯರ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವ ಹಿನ್ನೆಲೆ ಪಾಲಿಕೆಯ ಅಧಿಕಾರಿಗಳು ಮತ್ತು ಕೆಲವು ಸದಸ್ಯರುಗಳಲ್ಲಿ ಆತಂಕ ಸೃಷ್ಟಿಸಿದೆ. ರುಕ್ಮಿಣಿ ಮಾದೇಗೌಡ ಮತ್ತವರ ಪತಿ ಮಾದೇಗೌಡ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.