ಪಿಂಚಣಿ ಅದಾಲತ್ ಸದುಪಯೋಗಕ್ಕೆ ಕರೆ


ನವಲಗುಂದ,ಡಿ31 : ಕಂದಾಯ ಇಲಾಖೆಯ ಸಹಯೋಗದಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ ಏರ್ಪಡಿಸುವ ಪಿಂಚಣಿ ಅದಾಲತ್ (ಸಾಮಾಜಿಕ ಭದ್ರತಾ ಯೋಜನೆಗಳ ಮಂಜೂರಾತಿ) ಸೌಲಭ್ಯಗಳ ಸದುಪಯೋಗವನ್ನು ಅರ್ಹರು ಪಡೆಯುವಂತೆ ತಹಶೀಲ್ದಾರ್ ಸುಧೀರ್ ಸಾಹುಕಾರ್ ಕರೆ ನೀಡಿದರು.
ತಾಲ್ಲೂಕಿನ ಶಿರಕೋಳ ಗ್ರಾಮದಲ್ಲಿ ಕಂದಾಯ ಇಲಾಖೆ ವತಿಯಿಂದ, ಪಿಂಚಣಿ ದಿನ ಹಾಗೂ ಪಿಂಚಣಿ ಅದಾಲತ್‍ನಲ್ಲಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎನ್ ಎಚ್ ಕೋನರಡ್ಡಿ ಮಾತನಾಡಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದಸವಲತ್ತುಗಳು ತಲುಪಬೇಕು. ಈ ನಿಟ್ಟಿನಲ್ಲಿ ಜವಾಬ್ದಾರಿಯುತ ಪ್ರತಿಯೊಬ್ಬರು ಕೈ ಜೋಡಿಸಿಯೋಜನೆಗಳ ಸಾಕಾರಕ್ಕೆ ಮುಂದಾಗಬೇಕು. ಕಂದಾಯ ಇಲಾಖೆಯಿಂದ ಅಂಗವಿಕಲ, ವಿಧವಾ, ಸಂಧ್ಯಾ ಸುರಕ್ಷಾ ವೇತನ ಮುಂತಾದ ಹಲವು ಪಿಂಚಣಿ ಯೋಜನೆ ಅರ್ಹರಿಗೆ ತಲುಪಿಸಬೇಕು ಎಂದು ಹೇಳಿದರು.

ಉಪ ತಹಶೀಲ್ದಾರ್ ಸದರಬಾಯಿ, ಹರ್ಷವರ್ಧನ್, ರವಿ ಕಿರೇಸೂರ, ಗ್ರಾಮದ ಮಲ್ಲಿಕಾರ್ಜುನ ರೋಣದ, ಶಾಂತವ್ವ ಗುಜ್ಜಳ, ಪರಮೇಶ್ವರ್ ಹೊಸವಾಳ, ಶಿವಲೀಲಾ ಬೋರಶಟ್ಟಿ ಸೇರಿದಂತೆ ಗ್ರಾಮದ ಹಿರಿಯರು, ಮಹಿಳೆಯರು ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.