
ಶಿರಹಟ್ಟಿ,ಫೆ25: ರಾಜ್ಯ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯೋಜನೆಯನ್ನು ಜಾರಿಗೊಳಿಸುವಂತೆ ಸರಕಾರಕ್ಕೆ ಆಗ್ರಹ ಪಡಿಸಿ ರಾಜ್ಯದ ಸಮಸ್ತ ಸರಕಾರಿ ನೌಕರರ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಮಾಚ 1 ರಂದು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಲಾಗಿದೆ. ಕೂಡಲೇ ಸರಕಾರ ಎಚ್ಚೆತ್ತುಕೊಂಡು 7ನೇ ವೇತನ ಆಯೋಗದ ಸೌಲಭ್ಯಗಳನ್ನು ದಿ.1-7-2022 ರಿಂದ ಜಾರಿಗೊಳಿಸುವಂತೆ ಸರಕಾರಿ ನೌಕರರ ತಾಲೂಕಾಧ್ಯಕ್ಷ ಶರಣಬಸವಗೌಡ ಪಾಟೀಲ್ ಆಗ್ರಹಿಸಿದರು.
ಅವರು ಪಟ್ಟಣದ ಟೀಚರ ಸೊಸೈಯಿಟಿಯಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕ ಘಟಕದ ವತಿಯಿಂದ ಜರುಗಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದುಚುನಾವಣಾ ನೀತಿ ಸಂಹಿತೆ ಜಾರಿಗೆ ಮೊದಲು ಶೇ 40 ಪಿಟ್‍ಮೆಂಟಸೌಲಭ್ಯವನ್ನು ದಿ.1-7-2022 ರಿಂದ ಜಾರಿಗೆ ಬರುವಂತೆ ಸರಕಾರ ಆದೇಶ ಹೊರಡಿಸಬೇಕು. ರಾಜ್ಯದ ಎನ್‍ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂದ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್‍ಪಿಎಸ್ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರುವುದು ಸರಕಾರದ ಜವಾಬ್ದಾರಿಯಾಗಿದೆ. ಈಗಾಗಲೇ ಪಂಜಾಬ, ರಾಜಸ್ಥಾನ ಛತ್ತಿಘಡ, ಜಾರ್ಖಂಡ ,ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿಯೋಜನೆಯನ್ನು ಜಾರಿಗೆ ತಂದಿದ್ದು,ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಸಹ ಎನ್‍ಪಿಎಸ್ ಯೋಜನೆಯನ್ನು ರದ್ದು ಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ಸರಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶಾಲಾ ನೌಕರರ ಸಂಘದ ಮುಖಂಡರಾದ ಗಿರೀಶ ಮಠದ, ಸಿದ್ದು ಮಠದ, ಎಮ್.ಕೆ.ಲಮಾಣಿ, ಗಣೇಶ ಈರಕ್ಕನವರ, ಜಿ.ಎ.ಬೇವಿನಗಿಡದ, ಎಮ್.ಎ.ಬುಕಿಟಗಾರ, ಶಂಕರ ಕೊಪ್ಪಳ, ಮಲೆಪ್ಪ, ವಿಜಯಲಕ್ಷ್ಮೀ ಮಾಲ್ಸೂರೆ, ಎಮ್.ಜಿ.ಮಾಂಡ್ರೆ, ಪರಬತ ಶಿಕ್ಷಕರು ಮುಂತಾದವರು ಉಪಸ್ಥಿತರಿದ್ದರು.