ಪಿಎಂಜೆಎವೈ ಮಹಾತ್ವಾಂಕ್ಷೆ ಯೋಜನೆ


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಅ.೧೮; ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ (ಪಿಎಂಜೆಎವೈ) ಒಂದು ಮಹಾತ್ವಾಂಕ್ಷೆ ಯೋಜನೆಯಾಗಿದೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಹೇಳಿದರು.ಚಿತ್ರದುರ್ಗ ತಾಲೂಕಿನ ಸಿರಿಗೆರೆ ಬಿಎಲ್‍ಆರ್ ಪದವಿ ಪೂರ್ವ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಸ್ಪರ್ಧೆ ಏರ್ಪಡಿಸುವ ಮುನ್ನ ಪ್ರಾಸ್ತಾವಿಕವಾಗಿ ಆರೋಗ್ಯ  ಸೇವೆಗಳ ಕುರಿತು ಅವರು ಮಾತನಾಡಿದರು.ಆಯುಷ್ಮಾನ್  ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ ಗಂಭೀರ ಸ್ವರೂಪದ ಕಾಯಿಲೆಗಳಾದ ಹೃದಯದ ತೊಂದರೆ, ಅಪಘಾತ, ನವಜಾತ ಶಿಶುಗಳಿಗೆ ಸಂಬಂಧಿಸಿದ ಕಾಯಿಲೆಗಳು, ನರರೋಗ,  ಮೂತ್ರಪಿಂಡದ ಕಾಯಿಲೆ ಇಂತಹ ಗಂಭೀರ ಕಾಯಿಲೆಗಳಿಗೆ  ಬಿಪಿಎಲ್ ಕುಟುಂಬದ ಸದಸ್ಯರಿಗೆ ವರ್ಷಕ್ಕೆ ರೂ.5 ಲಕ್ಷದವರೆಗೆ ಮತ್ತು ಎಪಿಎಲ್ ಕುಟುಂಬದವರಿಗೆ ಶೇ.30ರಷ್ಟು ಉಚಿತ ಶಸ್ತ್ರ ಚಿಕಿತ್ಸಾ ಸೌಲಭ್ಯ, ಮೇಲ್ದರ್ಜೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು ಅನುದಾನಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ  ಪಡೆಸಿಕೊಳ್ಳಬೇಕೆಂದರು.