ಪಿಎಫ್‌ಐ ಮುಖಂಡರ ಮನೆ, ಕಛೇರಿ ದಾಳಿ – ವಿರೋಧ

ರಾಯಚೂರು.ಸೆ.೨೩- ದೇಶದ ವಿವಿಧ ಭಾಗಗಳಲ್ಲಿ ದಾಳಿ ಮಾಡಿದ ಎನ್‌ಐಎ ಸಂಸ್ಥೆಯೂ ಪಿಎಫ್‌ಐ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಬಂಧಿಸಿರುವುದನ್ನು ವಿರೋಧಿಸಿ ಇಂದು ನಗರದಲ್ಲಿ ಪ್ರತಿಭಟಿಸಲಾಯಿತು.
ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಸಂಸ್ಥೆಯ ಸಂಘದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮನೆ ಮತ್ತು ಕಛೇರಿಗಳ ಮೇಲೆ ದಾಳಿ ಮಾಡಿರುವುದು ತೀವ್ರವಾಗಿ ವಿರೋಧಿಸಲಾಯಿತು. ಪಿಎಫ್‌ಐ ರಾಷ್ಟ್ರೀಯ ನಾಯಕರನ್ನು ಕೂಡಲೇ ಬಿಡುಗಡೆ ಮಾಡುವಂತ ಆಗ್ರಹಿಸಲಾಯಿತು. ಈ ರೀತಿಯ ದಾಳಿಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಪಿಎಫ್‌ಐ ಮುಖಂಡರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.