ಪಿಎಸ್ಐ ಪರೀಕ್ಷೆ ಅಕ್ರಮ: ಆರೋಪಿ ಕಾಟೆಗಾಂವ್‌ಗೆ ಜಾಮೀನು

ಕಲಬುರಗಿ:ಜೂ.22: ಪಿಎಸ್ಐ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿಗೆ ಇದೇ ಮೊದಲ ಬಾರಿಗೆ ಕಲಬುರಗಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಪಿಎಸ್​ಐ ನೇಮಕಾತಿ ಅಕ್ರಮದ ಕಿಂಗ್​ಪಿನ್​​ ದಿವ್ಯಾ ಹಾಗರಗಿಗೆ ರಕ್ಷಣೆ ನೀಡಿ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಡಿ ಸುರೇಶ್ ಕಾಟೆಗಾಂವ್ ಎಂಬಾತನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.
ಜಾಮೀನಿಗಾಗಿ ಈತ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕಲಬುರಗಿ ಹೈಕೋರ್ಟ್ ಪೀಠ ಜಾಮೀನು ಮಂಜೂರು ಮಾಡಿತು.
ರಾಜೇಶ್ ಹಾಗರಗಿ ಅರ್ಜಿ ವಜಾ: ಇದೇ ವೇಳೆ, ಪ್ರಕರಣದ ಎ2 ಆರೋಪಿ ದಿವ್ಯಾ ಪತಿ ರಾಜೇಶ್ ಹಾಗರಗಿ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ‌.