ಪಿಎಸ್​ಐ ಹಗರಣ ನನಗೆ ಮೊದಲೇ ಗೊತ್ತಿದ್ದು ಪ್ರಶ್ನೆ ಮಾಡಿದ್ದೆ:ಭಾಸ್ಕರರಾವ್

ಬೆಂಗಳೂರು, ಜು.26-ರಾಜ್ಯದಲ್ಲಿ ನಡೆದಿರುವ ಪಿಎಸ್​ಐ ಹಗರಣದ ಕುರಿತು ನನಗೆ ಮೊದಲೇ ಗೊತ್ತಿತ್ತು ಎಂದು ನಗರ ಪೊಲೀಸ್ ಆಯುಕ್ತರಾಗಿದ್ದ ಎಎಪಿ ಮುಖಂಡ ಭಾಸ್ಕರ್​ ರಾವ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಇಂದು ಸುದ್ದಿಗಾರರ ಜೊತೆ
ಮಾತನಾಡಿರುವ ಅವರು, ಪಿಎಸ್​ಐ ಹಗರಣದ ಕುರಿತು ನನಗೆ ಮೊದಲೇ ವಾಸನೆ ಇತ್ತು ಅದರ ಬಗ್ಗೆ ಪ್ರಶ್ನೆ ಮಾಡಿದ್ದೆ ಎಂದಿದ್ದಾರೆ.
ನಾನು ಪೋಲಿಸ್ ಆಯುಕ್ತ ಆಗಿದ್ದಾಗ ಅಮೃತ್ ಪೌಲ್ ಮುಂದಿನ ಕಮೀಷನರ್ ಆಗುತ್ತಾರೆ ಎಂಬ ಸುದ್ದಿ ಇತ್ತು. ಆಗಾಗ್ಯೆ ಮುಖ್ಯಮಂತ್ರಿ ಮನೆಗೆ ಬರುವಾಗ ಕೂಡ ನಾನು ಪ್ರಶ್ನೆ ಮಾಡಿದ್ದೆ. ಇದು ಹಗರಣ ಎಂಬುವುದಾಗಿ ನನಗೆ ಮೊದಲೇ ಗೊತ್ತಿತ್ತು ಎಂದಿರುವ ಅವರು, ರಾಜ್ಯಪಾಲರ ಬಳಿಗೆ ಈ ವಿಷಯವನ್ನು ಕೊಂಡೊಯ್ದ ಮೊದಲ ಪಕ್ಷ ಆಮ್​ ಆದ್ಮಿ ಎಂಬುದಾಗಿಯೂ ಅವರು ಹೇಳಿದ್ದಾರೆ.
ಇನ್ನು ತನಿಖೆ ಆಗುವವರೆಗೂ ಪರೀಕ್ಷೆ ಮಾಡುವುದಿಲ್ಲ ಎನ್ನುವುದು ತಪ್ಪು ನೀತಿ. ನೀವು ಯುವಜನರಿಗೆ ಮೋಸ ಮಾಡುತ್ತಿದ್ದೀರಿ. ಇಡೀ ಪರೀಕ್ಷೆಯನ್ನೇ ರದ್ದುಗೊಳಿಸಿ ಹೊಸದಾಗಿ ಪರೀಕ್ಷೆಯನ್ನು ನಡೆಸಿ ಎಂದಿರುವ ಅವರು, ಸಿಐಡಿ ಒಳಗೆ ಹೋದ ಮೇಲೆ ಹೋಂ ಮಿನಿಸ್ಟರ್ ಮತ್ತು ಸಿಎಂ ಇನ್ವೆಸ್ಟಿಗೇಶನ್ ಆಫೀಸರ್ ಆಗುತ್ತಾರೆ. ಇದು ನ್ಯಾಯಾಂಗದಲ್ಲಿ ತನಿಖೆ ಆಗಬೇಕು ಎಂದು ನಾನು ಮೊದಲೇ ಆಗ್ರಹ ಮಾಡಿದ್ದೆ. ನ್ಯಾಯಾಂಗ ತನಿಖೆ ಆರಂಭ ಆದ 24 ಗಂಟೆಗಳಲ್ಲಿ ಅಮೃತ್ ಪೌಲ್ ಬಂಧನವಾಗಿದೆ ಎಂದು ಅವರು ಹೇಳಿದ್ದಾರೆ.