ಪಿಒಕೆ ವಶಕ್ಕೆ ಭಾರತ ಸಂಕಲ್ಪ

ನವದೆಹಲಿ,ಮೇ.೨- ಕಾಶ್ಮೀರದ ವಿಷಯದಲ್ಲಿ ಪದೇ ಪದೇ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಒಂದಿಲ್ಲೊಂದು ಕಿರಿಕಿರಿ ಮಾಡುತ್ತಿರುವ ನಡುವೆಯೇ, ಪಾಕ್ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯುವುದು ತನ್ನ ಗುರಿ ಎಂದು ಭಾರತ ಘೋಷಣೆ ಮಾಡಿದೆ.

ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರ ಭಾರತಕ್ಕೆ ಭೇಟಿ ನೀಡುವ ಮುನ್ನ ಕೇಂದ್ರ ಸರ್ಕಾರದಿಂದ ಈ ಘೋಷಣೆ ಹೊರಬಿದ್ದಿದೆ.

ಕಾಶ್ಮೀರದ ವಿಷಯದಲ್ಲಿ ಮೂಗು ತೂರಿಸುವ ಪಾಕಿಸ್ತಾನಕ್ಕೆ ತಿರುಗೇಟು ನೀಡುವ ರೀತಿಯಲ್ಲಿ ಕೇಂದ್ರ ಸರ್ಕಾರ ಪಾಕ್ ಆಕ್ರಿತ ಕಾಶ್ಮೀರವನ್ನು ತನ್ನದಾಗಿಸಿಕೊಳ್ಳುವುದಾಗಿ ಪ್ರಕಟಿಸಿದೆ.

ಬಿಲಾವಲ್ ಭುಟ್ಟೋ ಜರ್ದಾರಿ ಅವರ ಭಾರತಕ್ಕೆ ಭೇಟಿ ನೀಡುವ ಮೊದಲು, ಕೇಂದ್ರ ಸರ್ಕಾರ, ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ತನ್ನ ನಿಲುವನ್ನು ಪುನರುಚ್ಚರಿಸಿದೆ, ಆಕ್ರಮಿತ ಪ್ರದೇಶವನ್ನು ಹಿಂಪಡೆಯುವುದು ತನ್ನ ಕಾರ್ಯಸೂಚಿಯಲ್ಲಿದೆ ಎಂದು ಸ್ಪಷ್ಟಪಡಿಸಿದೆ.

ಮುಂದೊಂದು ದಿನ ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಒಕ್ಕೂಟದೊಂದಿಗೆ ಸೇರಿಕೊಳ್ಳಲಿದೆ ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

ಭಾರತ ಸರ್ಕಾರದ ಈ ಘೋಷಣೆಯಿಂದ ಪಾಕಿಸ್ತಾನ ಮುಟ್ಟಿ ನೋಡಿಕೊಳ್ಳುವಂತಾಗಿದೆ. ಕಾಶ್ಮೀರ ಪಾಕಿಸ್ತಾನಕ್ಕೆ ಸೇರಬೇಕು ಎಂದು ಆಗಾಗ ಕಿರಿ ಕಿರಿ ಮಾಡುವ ಪಾಕಿಸ್ತಾನಕ್ಕೆ ಇದೀಗ ಪಾಕ್ ಆಕ್ರಮಿತ ಕಾಶ್ಮೀತ ವಶಕ್ಕೆ ಪಡೆಯುವುದಾಗಿ ಪ್ರಕಟಿಸಿರುವುದರಿಂದ ಅದನ್ನು ತನ್ನ ಬಳಿ ಉಳಿಸಿಕೊಳ್ಳಲು ಹೆಣಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.