ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾಗಿ ರಾಜಕುಮಾರ ಕರಂಜಿ

ಬೀದರ್:ಜ.12: ಇಲ್ಲಿಯ ಪ್ರಾಥಮಿಕ ಸಹಕಾರ, ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಕಾರ್ಡ್) ಬ್ಯಾಂಕ್ ನೂತನ ಅಧ್ಯಕ್ಷರಾಗಿ ರಾಜಕುಮಾರ ಕರಂಜಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಕೆಯಾದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿ ಶಿವಾನಂದ ಆಯ್ಕೆಯನ್ನು ಅಧಿಕೃತವಾಗಿ ಪ್ರಕಟಿಸಿದರು.

ಬ್ಯಾಂಕ್ ನಿರ್ದೇಶಕರು ಹಾಗೂ ಸಿಬ್ಬಂದಿ ನೂತನ ಅಧ್ಯಕ್ಷರಿಗೆ ಹೂಮಾಲೆ ಹಾಕಿ, ಶಾಲು ಹೊದಿಸಿ ಸನ್ಮಾನಿಸಿದರು.