ಪಿಕ್ ಅಪ್ ಟ್ರಕ್‌ಗೆ ಜೀಪ್ ಡಿಕ್ಕಿ ೬ ಮಂದಿ ಸಾವು

ಬಲ್ಲಿಯಾ(ಉತ್ತರ ಪ್ರದೇಶ),ಫೆ.೨೭- ಪಿಕ್ ಅಪ್ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ದುರ್ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.ಜಿಲ್ಲೆಯ ಸುಗರ್ ಛಾಪ್ರಾ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ. ಎಸ್ಪಿ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಅಪಘಾತ ಸ್ಥಳಕ್ಕೆ ತಲುಪಿದ್ದಾರೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕವಾಗಿರುವ ನಾಲ್ವರನ್ನು ವಾರಣಾಸಿಗೆ ರವಾನಿಸಲಾಗಿದೆ. ಜೀಪಿನಲ್ಲಿದ್ದವರು ಮಾಸುಂಪುರ್ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ದೋಕ್ತಿಗೆ ಹಿಂತಿರುಗುತ್ತಿದ್ದರು.
ಉತ್ತರ ಪ್ರದೇಶ, ಬಿಹಾರದಲ್ಲಿ ಎರಡು ಪ್ರತ್ಯೇಕ ಅಪಘಾತ, ೧೫ ಮಂದಿ ಸಾವು ಉತ್ತರ ಪ್ರದೇಶ ಹಾಗೂ ಬಿಹಾರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಒಟ್ಟು ೧೫ ಮಂದಿ ಸಾವನ್ನಪ್ಪಿದ್ದಾರೆ. ಬಿಹಾರದ ಕೈಮೂರ್ ಜಿಲ್ಲೆಯ ದೇವಕಲಿ ಗ್ರಾಮದ ಬಳಿ ನಿನ್ನೆ ಸಂಜೆ ಅಪಘಾತ ಸಂಭವಿಸಿದೆ.
ಹಾಗೆಯೇ ಉತ್ತರ ಪ್ರದೇಶದಲ್ಲೂ ಬಸ್? ಹಾಗೂ ಟ್ರ್ಯಾಕ್ಟರ್ ಹಾಗೂ ಬಸ್? ನಡುವೆ ಡಿಕ್ಕಿ ಸಂಭವಿಸಿದೆ.
ಬಿಹಾರದ ಕೈಮೂರ್ ಜಿಲ್ಲೆಯ ದೇವಕಲಿ ಗ್ರಾಮದ ಬಳಿ ನಿನ್ನೆ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ೯ ಜನರು ಸಾವನ್ನಪ್ಪಿದ್ದಾರೆ. ಎನ್‌ಎಚ್ ೨ ರ ಉದ್ದಕ್ಕೂ ದೇವಕಾಲಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಸಸಾರಾಮ್‌ನಿಂದ ವಾರಾಣಸಿಗೆ ತೆರಳುತ್ತಿದ್ದ ಕಾರು, ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಆಗ ಎದುರಿನ ಲೇನ್‌ಗೆ ದ್ವಿಚಕ್ರವಾಹನ ಮತ್ತು ಕಾರು ಪಲ್ಟಿಯಾಗಿ ಟ್ರಕ್ ಡಿಕ್ಕಿ ಹೊಡೆದಿದೆ.